ಹೈದರಾಬಾದ್: ತೆಲುಗು ನಟ ನಾಗ ಚೈತನ್ಯ ಅವರು ನಟಿ ಶೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ನಟ ಹಾಗೂ ನಾಗ ಚೈತನ್ಯ ತಂದೆ, ನಾಗಾರ್ಜುನ ಅವರು ನಿಶ್ಚಿತಾರ್ಥದ ಫೋಟೊ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.
’ನಾಗ ಚೈತನ್ಯ ಮತ್ತು ಶೋಭಿತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ನಿಮ್ಮೊಂದಿಗೆ (ಅಭಿಮಾನಿ) ಮಾಹಿತಿ ಹಂಚಿಕೊಳ್ಳಲು ಸಂತೋಷವಾಗುತ್ತಿದೆ. ಶೋಭಿತಾ ಅವರನ್ನು ನಮ್ಮ ಕುಟುಂಬಕ್ಕೆ ಬರಮಾಡಿಕೊಳ್ಳುತ್ತಿರುವುದು ನಮ್ಮೆಲ್ಲರಿಗೂ ಖುಷಿಯ ಸಂಗತಿ. ಈ ಜೋಡಿಯು ಜೀವನದಲ್ಲಿ ಪ್ರೀತಿ ಮತ್ತು ಸಂತೋಷ ತುಂಬಿರಲಿ ಎಂದು ಆಶಿಸುತ್ತೇನೆ‘ ಎಂದು ನಾಗಾರ್ಜುನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.