ಮಂಗಳವಾರ, ಜನವರಿ 19, 2021
23 °C

‘ಪದವಿಪೂರ್ವ‘ಕ್ಕೆ ಪ್ರವೇಶಿಸಿದ ನಟರಾಜ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟರಾಜ್‌ ಅವರು ‘ಪದವಿಪೂರ್ವ’ಕ್ಕೆ ಪ್ರವೇಶ ಪಡೆದಿದ್ದಾರೆ. ಯೋಗರಾಜ್‌ ಸಿನಿಮಾಸ್‌ ಹಾಗೂ ರವಿ ಶಾಮನೂರ್‌ ಫಿಲ್ಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ‘ಪದವಿಪೂರ್ವ’. 

ನಟರಾಜ್‌ ಅವರು ‘ರಾಮಾ ರಾಮಾ ರೇ’ ಚಿತ್ರದ ಮೂಲಕ ಖ್ಯಾತಿ ಪಡೆದವರು. ಇತ್ತೀಚೆಗೆ ‘ಪದವಿಪೂರ್ವ’ದ ಚಿತ್ರೀಕರಣದಲ್ಲಿ ಅವರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ಅವರಿಗೆ ಪ್ರಮುಖ ಪಾತ್ರ ಇದೆ ಎಂದು ಚಿತ್ರತಂಡ ಹೇಳಿದೆ.

ಚಿತ್ರದ ಎರಡನೇ ಹಂತದ ಶೂಟಿಂಗ್‌ ನಾಲ್ಕು ದಿನಗಳ ಹಿಂದೆ ಮುಕ್ತಾಯಗೊಂಡಿದೆ. ಮಲೆನಾಡು ಭಾಗದಲ್ಲಿ ಹಾಡುಗಳ ಚಿತ್ರೀಕರಣ ನಡೆದಿದೆ. ಯೋಗರಾಜ್‌ ಭಟ್ ಸಾಹಿತ್ಯವಿದೆ. ಅರ್ಜುನ್‌ ಜನ್ಯ ಸಂಗೀತ ನೀಡಿದ್ದಾರೆ. ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣ ನಡೆಸಿದ್ದಾರೆ. ಮಧು ತುಂಬಕೆರೆ ಅವರು ಸಂಕಲನ ಮಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು