ಭಾನುವಾರ, ಸೆಪ್ಟೆಂಬರ್ 19, 2021
28 °C

ಡ್ರಗ್ಸ್‌ ಪ್ರಕರಣ: ತೆಲುಗು ನಟ ನವದೀಪ್‌ ಇಡಿ ಮುಂದೆ ಹಾಜರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಹೈದರಾಬಾದ್: ಮಾದಕ ವಸ್ತುಗಳ ಜಾಲದ ಪ್ರಕರಣದಲ್ಲಿನ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ತೆಲುಗು ನಟ ಪಿ.ನವದೀಪ್‌ ಅವರು ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ವಿಚಾರಣೆಗೆ ಹಾಜರಾದರು.

2017, ಜುಲೈ 2 ರಂದು ತೆಲಂಗಾಣದ ಅಬಕಾರಿ ಇಲಾಖೆಯು ಡ್ರಗ್ಸ್‌ ಜಾಲವೊಂದನ್ನು ಭೇದಿಸಿತ್ತು. ಈ ವೇಳೆ ಎಲ್‌ಎಸ್‌ಡಿ ಮತ್ತು ಎಂಡಿಎಂನಂತಹ ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ಅಮೆರಿಕದ ನಾಗರಿಕ ಸೇರಿದಂತೆ 20 ಮಂದಿಯನ್ನು ಬಂಧಿಸಲಾಗಿತ್ತು.

ಈ ಸಂಬಂಧ ನವದೀಪ್‌ ಸೇರಿದಂತೆ ತೆಲುಗು ಚಿತ್ರರಂಗದ 10 ಮಂದಿಗೆ ಇ.ಡಿ ಸಮನ್ಸ್‌ ಜಾರಿ ಮಾಡಿತ್ತು. ಆಗಸ್ಟ್‌ 31ರಿಂದೀಚೆಗೆ ನಿರ್ದೇಶಕ ಪುರಿ ಜಗನ್ನಾಥ್, ನಟಿಯರಾದ ಚಾರ್ಮಿ ಕೌರ್, ರಕುಲ್‌ ಪ್ರೀತ್‌ ಸಿಂಗ್‌, ನಟ ನಂದು,  ರಾನಾ ದಗ್ಗುಬಾಟಿ ಮತ್ತು ರವಿತೇಜಾ ಅವರು ಇ.ಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು