ಮಂಗಳವಾರ, ಸೆಪ್ಟೆಂಬರ್ 28, 2021
25 °C

ನಟ ನಿಖಿಲ್‌ ಕುಮಾರಸ್ವಾಮಿ ಪತ್ನಿ ರೇವತಿ ಸೀಮಂತ ಸಂಭ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ನಿಖಿಲ್‌ ಕುಮಾರಸ್ವಾಮಿ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ನಿಖಿಲ್‌ ಅವರ ಪತ್ನಿ ರೇವತಿ ಈಗ ತುಂಬು ಗರ್ಭಿಣಿ. ರೇವತಿ ಅವರ ಸೀಮಂತ ಕಾರ್ಯಕ್ರಮ ಸೋಮವಾರ ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನಲ್ಲಿರುವ ಮಾನ್ವಿ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಿತು. 

ಈ ಸಂಭ್ರಮದ ಕಾರ್ಯಕ್ರಮದಲ್ಲಿ ನಿಖಿಲ್‌ ಅವರ ಕುಟುಂಬ ಸದಸ್ಯರು ಹಾಗೂ ರಾಜಕೀಯ ವಲಯದ ಆಪ್ತರಷ್ಟೇ ಭಾಗವಹಿಸಿದ್ದರು. ಕಳೆದ ಕೆಲ ವರ್ಷಗಳಿಂದ ಸಿನಿಮಾ ಜೊತೆಗೆ ರಾಜಕೀಯದಲ್ಲೂ ನಿಖಿಲ್‌ ಸಕ್ರಿಯರಾಗಿದ್ದು, ಪ್ರಸ್ತುತ ‘ರೈಡರ್‌’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಸೀಮಂತ ಸಮಾರಂಭದಲ್ಲಿ ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡ ದಂಪತಿ, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಸಚಿವ ಮುನಿರತ್ನ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಟಿ.ಎ.ಶರವಣ ಮತ್ತಿತರರು ಭಾಗವಹಿಸಿದ್ದರು. ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಇರುವ ಅವರ ಫಾರ್ಮ್‌ ಹೌಸ್‌ನಲ್ಲಿ 2020ರ ಏಪ್ರಿಲ್‌ 17ರಂದು ನಿಖಿಲ್‌ ಹಾಗೂ ರೇವತಿ ಅವರ ಕಲ್ಯಾಣವು ನಡೆದಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು