ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆ: ರಾಮನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ –ನಿಕ್‌ ಜೋನಾಸ್‌ ದಂಪತಿ

Published 20 ಮಾರ್ಚ್ 2024, 10:18 IST
Last Updated 20 ಮಾರ್ಚ್ 2024, 10:18 IST
ಅಕ್ಷರ ಗಾತ್ರ

ಅಯೋಧ್ಯೆ: ಬಾಲಿವುಡ್‌ ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ಅವರ ಪತಿ ಗಾಯಕ ನಿಕ್ ಜೋನಾಸ್‌ ದಂಪತಿಯು ಮಗಳು ‘ಮಾಲತಿ ಮೇರಿ’ಯೊಂದಿಗೆ (Malti Marie) ಇಂದು (ಬುಧವಾರ) ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಬಾಲರಾಮನ ದರ್ಶನ ಪಡೆದಿದ್ದಾರೆ.

ಪ್ರಿಯಾಂಕಾ ಹಾಗೂ ನಿಕ್ 2018ರ ಡಿಸೆಂಬರ್‌ನಲ್ಲಿ ಜೈಪುರದಲ್ಲಿ ಮದುವೆಯಾಗಿದ್ದರು. ಬಳಿಕ 2022ರ ಜನವರಿ 22ರಂದು ಪ್ರಿಯಾಂಕಾ –ನಿಕ್ ದಂಪತಿ ಬಾಡಿಗೆ ತಾಯಿಯ ಮೂಲಕ ಮಗು ಪಡೆದಿದ್ದರು.

ಸದ್ಯ ಅಮೆರಿಕದಲ್ಲಿ ನೆಲೆಸಿರುವ ಪ್ರಿಯಾಂಕಾ ಅವರು ಹಾಲಿವುಡ್‌ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ಬೇವಾಚ್‘, ‘ಎ ಕಿಡ್ ಲೈಕ್ ಜ್ಯಾಕ್‘, ‘ಇಸಂಟ್‌ ಇಟ್ ರೊಮ್ಯಾಂಟಿಕ್’ ಮತ್ತು ‘ವಿ ಕ್ಯಾನ್ ಬಿ ಹೀರೋಸ್‘ ಚಿತ್ರಗಳಲ್ಲಿ ಅಭಿನಯಿಸಿದ್ದರು.

ವರ್ಷಾರಂಭದಲ್ಲಿ ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆದಿತ್ತು. ರಾಮಮಂದಿರಕ್ಕೆ ದೈನಂದಿನ ಸರಾಸರಿ ಒಂದರಿಂದ ಒಂದೂವರೆ ಲಕ್ಷ ಜನ ಭಕ್ತರು ಭೇಟಿ ನೀಡುತ್ತಿದ್ದಾರೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT