ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆಯಲ್ಲಿ ಪುನೀತ್‌ ನಟನೆಯ 'ಜೇಮ್ಸ್‌' ಶೂಟಿಂಗ್‌

Last Updated 14 ಅಕ್ಟೋಬರ್ 2020, 8:32 IST
ಅಕ್ಷರ ಗಾತ್ರ

ಹೊಸಪೇಟೆ: ನಟ ಪುನೀತ್‌ ರಾಜಕುಮಾರ್‌ ಅವರ ‘ಜೇಮ್ಸ್‌’ ಚಿತ್ರದ ಚಿತ್ರೀಕರಣ ತಾಲ್ಲೂಕಿನ ಕಮಲಾಪುರ ಸಮೀಪದ ‘ಆರೆಂಜ್‌ ಕೌಂಟಿ’ ಹೋಟೆಲ್‌ನಲ್ಲಿ ನಡೆಯುತ್ತಿದೆ.

ಪುನೀತ್‌ ಸೇರಿದಂತೆ ಚಿತ್ರ ತಂಡದ 200 ಸದಸ್ಯರು ಹೋಟೆಲ್‌ನಲ್ಲಿ ಬೀಡು ಬಿಟ್ಟಿದ್ದಾರೆ. ಕೊರೊನಾ ಲಾಕ್‌ಡೌನ್‌ಗೂ ಮುನ್ನ ಚಿತ್ರದ ಕೆಲ ದೃಶ್ಯಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿತ್ತು. ಲಾಕ್‌ಡೌನ್‌ ಬಳಿಕ ಸ್ಥಗಿತಗೊಂಡಿದ್ದ ಚಿತ್ರೀಕರಣ ಮಂಗಳವಾರದಿಂದ ಪುನಃ ಆರಂಭಗೊಂಡಿದೆ. ಚಿತ್ರದ ಸಂಭಾಷಣೆ ದೃಶ್ಯದ ಚಿತ್ರೀಕರಣ ನಡೆಯುತ್ತಿದೆ. ಇನ್ನೆರಡು ದಿನ ಇಲ್ಲಿಯೇ ಚಿತ್ರೀಕರಣ ನಡೆಯಲಿದೆ. ಬಳಿಕ ನೆರೆಯ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಶೂಟಿಂಗ್‌ ನಡೆಸಲು ಚಿತ್ರತಂಡ ನಿರ್ಧರಿಸಿದೆ.

‘ಈಗಷ್ಟೇ ಸಿನಿಮಾದ ಶೂಟಿಂಗ್‌ ಆರಂಭವಾಗಿದೆ. ‌ ಸಿನಿಮಾದ ಶೇ 95ರಷ್ಟು ಭಾಗದ ಚಿತ್ರೀಕರಣ ಇನ್ನಷ್ಟೇ ನಡೆಯಬೇಕಿದೆ. ತೆಲುಗು ನಟ ಶ್ರೀಕಾಂತ್‌ ಕೂಡ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಚೇತನ್‌ ಕುಮಾರ್‌ ನಿರ್ದೇಶನ ಮಾಡುತ್ತಿದ್ದಾರೆ. ಇನ್ನಷ್ಟೇ ನಟಿ ಆಯ್ಕೆ ನಡೆಯಬೇಕಿದೆ’ಎಂದು ಸ್ಥಳೀಯ ಉದ್ಯಮಿ, ಚಿತ್ರದ ನಿರ್ಮಾಪಕ ಕಿಶೋರ್‌ ಪತ್ತಿಕೊಂಡ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಮಾಧ್ಯಮದವರ ಪ್ರವೇಶ ನಿರ್ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT