ಶುಕ್ರವಾರ, ನವೆಂಬರ್ 27, 2020
20 °C

ಬೆಂಗಳೂರಿನಲ್ಲಿ ನಟ ಪುನೀತ್‌ ರಾಜ್‌ಕುಮಾರ್‌ ಸೈಕಲ್‌ ಸವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮನೆಯಲ್ಲಿ ಇರಲಿ ಅಥವಾ ಶೂಟಿಂಗ್‌ ಸೆಟ್‌ನಲ್ಲಿರಲಿ ಪ್ರತಿದಿನವೂ ದೈಹಿಕ ಕಸರತ್ತು ಮಾಡುವುದನ್ನು ‘ಪವರ್‌ ಸ್ಟಾರ್’ ಪುನೀತ್‌ ರಾಜ್‌ಕುಮಾರ್ ತಪ್ಪಿಸುವುದಿಲ್ಲ. ಫಿಟ್‌ನೆಸ್‌ ವಿಚಾರದಲ್ಲಿ ಅವರು ಇಂದಿಗೂ ಯುವಜನರಿಗೆ ಮಾದರಿ.

ಲಾಕ್‌ಡೌನ್‌ ಅವಧಿಯಲ್ಲಿ ಫಿಟ್‌ನೆಸ್‌ಗೆ ಸಂಬಂಧಿಸಿದ ವಿಡಿಯೊಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದರು. ಈಗ ಅವರು ಮತ್ತೊಂದು ವಿಡಿಯೊ ಹಂಚಿಕೊಂಡಿದ್ದು, ಅದು ವೈರಲ್‌ ಆಗಿದೆ.

ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಯಾರಿಗೂ ಗೊತ್ತಾಗದಂತೆ ಪುನೀತ್‌ ಅವರು ಸೈಕಲ್‌ನಲ್ಲಿ ಬೆಂಗಳೂರಿನಲ್ಲಿ ಸುತ್ತಾಡಿದ್ದಾರೆ. ಈ ವಿಡಿಯೊವನ್ನು ಟ್ವಿಟರ್‌ನಲ್ಲಿಯೂ ಹಂಚಿಕೊಂಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಿಂದ ಅವರು ವಿಧಾನಸೌಧದವರೆಗೂ ಸೈಕಲ್ ಸವಾರಿ ಮಾಡಿರುವುದು ವಿಶೇಷ. ಈ ವಿಡಿಯೊ ತುಣುಕನ್ನು ಅವರು ಪಿಆರ್‌ಕೆ ಯೂಟ್ಯೂಬ್ ಚಾನೆಲ್‌ನಲ್ಲಿಯೂ ಹಂಚಿಕೊಂಡಿದ್ದು, ಅಭಿಮಾನಿಗಳು ಖುಷಿಯಾಗಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು