ಗುರುವಾರ , ಏಪ್ರಿಲ್ 2, 2020
19 °C

ಕೋವಿಡ್‌ ಭೀತಿ: ಪುನೀತ್‌ ಹುಟ್ಟುಹಬ್ಬ ಆಚರಣೆ ರದ್ದು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಕೋವಿಡ್‌ 19’ ಭೀತಿಯು ‘ಪವರ್‌ ಸ್ಟಾರ್’ ಪುನೀತ್‌ ರಾಜ್‌ಕುಮಾರ್‌ ಅವರ ಹುಟ್ಟುಹಬ್ಬಕ್ಕೂ ತಟ್ಟಿದೆ. ಮಾರ್ಚ್‌ 17ರಂದು ಅಪ್ಪು 45ನೇ ವಸಂತಕ್ಕೆ ಕಾಲಿಡಲಿದ್ದಾರೆ. ಅಂದು ಅದ್ದೂರಿಯಾಗಿ ಹುಟ್ಟುಹಬ್ಬದ ಆಚರಣೆಗೆ ಅವರ ಅಭಿಮಾನಿಗಳು ನಿರ್ಧರಿಸಿದ್ದರು. ಆದರೆ, ಕೋವಿಡ್‌ ಭೀತಿಯ ಪರಿಣಾಮ ಅದ್ದೂರಿ ಆಚರಣೆಯನ್ನು ರದ್ದುಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜನ್ಮದಿನದಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಪುನೀತ್‌ ಅವರ ನಿವಾಸದ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುತ್ತಾರೆ. ಕೊರೊನಾ ಸೋಂಕು ಹರಡುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈ ಬಾರಿ ಸರಳವಾಗಿ ಜನ್ಮದಿನ ಆಚರಿಸಿಕೊಳ್ಳಲು ಪುನೀತ್‌ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಪ್ರಸ್ತುತ ಪುನೀತ್‌ ಅವರು ಸಂತೋಷ್‌ ಆನಂದ್‌ರಾಮ್‌ ಆ್ಯಕ್ಷನ್‌ ಕಟ್‌ ಹೇಳಿರುವ ‘ಯುವರತ್ನ’ ಮತ್ತು ಚೇತನ್‌ಕುಮಾರ್‌ ನಿರ್ದೇಶಿಸುತ್ತಿರುವ ‘ಜೇಮ್ಸ್‌’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ ‘ಯುವರತ್ನ’ ಚಿತ್ರ ನಿರ್ಮಿಸುತ್ತಿರುವ ಹೊಂಬಾಳೆ ಫಿಲ್ಸ್ಮ್ ಮಾರ್ಚ್‌ 16ರ ಸಂಜೆ 6.03ಗಂಟೆಗೆ ಹೊಂಬಾಳೆಯ ಅಧಿಕೃತ ಯ್ಯೂಟೂಬ್‌ ಚಾನೆಲ್‌ನಲ್ಲಿ ಚಿತ್ರದ ಡೈಲಾಗ್‌ ಟೀಸರ್‌ ಬಿಡುಗಡೆಗೆ ಸಿದ್ಧತೆ ನಡೆಸಿದೆ. ಜೇಮ್ಸ್‌ ಚಿತ್ರತಂಡ ಕೂಡ ಈ ಚಿತ್ರದ ಪೋಷನ್‌ ಪೋಸ್ಟರ್‌ ಬಿಡುಗಡೆ ಮಾಡಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)