ರಾಮನಗರ: ರಸ್ತೆಯಲ್ಲಿ ಪೆಟ್ರೋಲ್ ಬಾಂಬ್ ಮಾದರಿಯಲ್ಲಿ ಸ್ಫೋಟ ಮಾಡಿ ರೀಲ್ಸ್ ವಿಡಿಯೊ ಚಿತ್ರೀಕರಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡಿದ ಆರೋಪದ ಮೇಲೆ, ‘ಬಿಗ್ ಬಾಸ್’ ರಿಯಾಲಿಟಿ ಷೋ ಮಾಜಿ ಸ್ಪರ್ಧಿ ಹಾಗೂ ನಟ ರಜತ್ ವಿರುದ್ದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲಾಗಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು ಕೆಂಗೇರಿ ಹೋಬಳಿ ಕನಕಪುರ ರಸ್ತೆ ಬಳಿಯ ವಡೇರಹಳ್ಳಿಯ ಸಾರ್ವಜನಿಕ ರಸ್ತೆಯಲ್ಲಿ ಇತ್ತೀಚೆಗೆ ರಜತ್ ಅವರು ಬೈಕ್ ಬಳಸಿ ಮಾಡಿದ್ದ ಸ್ಪಂಟ್ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿಡಿಯೊ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ ಪೊಲೀಸರು ಎಚ್ಚೆತ್ತಕೊಂಡು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ರಜತ್ ಅವರ ವಿರುದ್ಧ ಪೆಟ್ರೋಲ್ ಬಳಸಿ ಸ್ವೋಟಿಸಿ ಸಾರ್ವಜನಿಕ ರಸ್ತೆಯನ್ನು ಹಾಳು ಮಾಡಿರುವುದು, ಸಂಚಾರ ನಿಯಮಗಳ ಉಲ್ಲಂಘನೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತಂದಿರುವ ಆರೋಪದ ಮೇಲೆ ಬಿಎನ್ಎಸ್ನ ವಿವಿಧ ಕಲಂಗಳಡಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ರಜತ್ ಅವರಿಗೆ ನೋಟಿಸ್ ನೀಡಲಾಗುವುದು’ ಎಂದು ಡಿವೈಎಸ್ಪಿ ಬಿ.ಎನ್. ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಬೈಕ್ ಪ್ರಚಾರಕ್ಕೆ ಮಾಡಿದ್ದು: ರಜತ್ ಅವರು ಈ ಸ್ಟಂಟ್ ವಿಡಿಯೊ ಮಾಡಿದ್ದು ಬೈಕ್ ಪ್ರಚಾರಕ್ಕಾಗಿ. ರಜತ್ ಬೈಕ್ನಲ್ಲಿ ಸ್ಟೈಲಿಶ್ ಆಗಿ ಎಂಟ್ರಿ ಕೊಟ್ಟಾಗ ಅವರ ಹಿಂದೆ ಪೆಟ್ರೋಲ್ ಬಾಂಬ್ ಮಾದರಿಯಲ್ಲಿ ಬೆಂಕಿ ಸ್ಫೋಟಗೊಳ್ಳುತ್ತದೆ. ಆಗ ಅವರು ಕೈಯಲ್ಲಿ ಸಿಗರೇಟ್ ಹಿಡಿದು ಪೋಸ್ ಕೊಟ್ಟು ಮುಂದಕ್ಕೆ ನಡೆದುಕೊಂಡು ಬರುತ್ತಾರೆ ಎಂದು ಪೊಲೀಸರು ತಿಳಿಸಿದರು.

ಬೈಕ್ ಮೇಲೆ ರಜತ್ ಕುಳಿತು ಪೋಸ್ ನೀಡುವ ದೃಶ್ಯಗಳಿದ್ದು, ಆಗ ಅವರ ಹಿಂದೆ ಬೆಂಕಿ ಉರಿಯುತ್ತಿರುತ್ತದೆ. ಸಾರ್ವಜನಿಕ ಪ್ರದೇಶದಲ್ಲಿ ಸ್ಫೋಟಕವನ್ನು ಬಳಸಿ ಇಂತಹ ಅಪಾಯಕಾರಿ ಪ್ರಯೋಗ ಮಾಡಿದ್ದರ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಹಲವು ವಿವಾದ: ರಜತ್ ತಮ್ಮ ಮಾತು ಮತ್ತು ವರ್ತನೆ ಮೂಲಕ ವಿವಾದ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಅವರ ವಿರುದ್ದ ಕೆಲವೆಡೆ ಪ್ರಕರಣ ಕೂಡ ದಾಖಲಾಗಿದೆ. ಬಿಗ್ ಬಾಸ್ನ ಮತ್ತೊಬ್ಬ ಮಾಜಿ ಸ್ಪರ್ಧಿ ಡಾಗ್ ಸತೀಶ್ ಅವರ ಸ್ನೇಹಿತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ರಜತ್ ವಿರುದ್ದ ಎಫ್ಐಆರ್ ದಾಖಲಾಗಿತ್ತು.

ಮತ್ತೊಬ್ಬ ಸ್ಪರ್ಧಿ ವಿನಯ್ ಗೌಡ ಜೊತೆ ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲೂ ಅವರು ಸುದ್ದಿಯಲ್ಲಿದ್ದರು. ಮೈಸೂರಿನಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಬಳಿ ಫೋಟೋಶೂಟ್ ಮಾಡಿಸಿಕೊಂಡು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಹೀಗೆ ಸಾಲು ಸಾಲು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿರುವ ರಜತ್, ಈಗ ರೀಲ್ಸ್ಗಾಗಿ ರಸ್ತೆಯಲ್ಲಿ ಸ್ಫೋಟಿಸಿದ ಕಾರಣಕ್ಕೆ ಮತ್ತೆ ಸುದ್ದಿಯಲ್ಲಿದ್ದಾರೆ.

ಸ್ಪಷ್ಟನೆ, ಕ್ಷಮೆಯಾಚನೆ

ರೀಲ್ಸ್ಗಾಗಿ ಮಾಡಿದ ವಿಡಿಯೊಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಡಿಲಿಟ್ ಮಾಡಿರುವ ರಜತ್ ಈ ಕುರಿತು ಸ್ಪಷ್ಟನೆಯ ವಿಡಿಯೊ ಹಂಚಿಕೊಂಡಿದ್ದಾರೆ. ‘ಇದು ಕೇವಲ ಬೈಕ್ ಪ್ರಚಾರಕ್ಕಾಗಿ ಮಾಡಿದ ವಿಡಿಯೊ. ಚಿತ್ರೀಕರಣದ ವೇಳೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಯಾರಿಗೂ ತೊಂದರೆಯಾಗದಂತೆ ರಸ್ತೆ ಬದಿಯಲ್ಲಿ ಚಿತ್ರೀಕರಿಸಲಾಗಿತ್ತು’ ಎಂದಿದ್ದಾರೆ.

‘ಪ್ರಮೋಷನಲ್ ವಿಡಿಯೋಗಳನ್ನು ಈ ರೀತಿ ಹಾಕಬಾರದು ಎಂದು ನನಗೆ ತಿಳಿದಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಅಪ್ಲೋಡ್ ಆಗಿರುವ ವಿಚಾರ ತಕ್ಷಣ ಗಮನಕ್ಕೆ ಬಂದಿರಲಿಲ್ಲ. ವಿಷಯ ತಿಳಿದ ಕೂಡಲೇ ವಿಡಿಯೊ ಡಿಲಿಟ್ ಮಾಡಿಸಿದ್ದೇನೆ. ವಿಡಿಯೊ ಮೂಲಕ ಯಾರನ್ನೂ ನೋಯಿಸುವ ಅಥವಾ ಸಮಾಜಕ್ಕೆ ತಪ್ಪು ಸಂದೇಶ ನೀಡುವ ಉದ್ದೇಶ ನನಗಿರಲಿಲ್ಲ. ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಿ. ಈ ವಿಷಯವನ್ನು ಇಲ್ಲಿಗೆ ಬಿಟ್ಟು ಬಿಡಿ’ ಎಂದು ಮನವಿ ಮಾಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.