ಅತ್ಯಂತ ಉತ್ಸಾಹದಿಂದ ರಶ್ಮಿಕಾ ವ್ಯಾಯಾಮ ಮಾಡುತ್ತಿರುವ ದೃಶ್ಯಗಳು ವಿಡಿಯೊದಲ್ಲಿದೆ. ಜಿಮ್ ಹೊರತುಪಡಿಸಿ ಮನೆಯಲ್ಲಿಯೇ ಸರಳವಾಗಿ ಮಾಡಬಹುದಾದ ಕೆಲವು ವ್ಯಾಯಾಮಾಗಳನ್ನು ನಟಿ ವಿಡಿಯೊ ಮೂಲಕ ಹಂಚಿಕೊಂಡಿದ್ದಾರೆ.
ಡೀಫ್ ಫೇಕ್ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದ ನಟಿ ರಶ್ಮಿಕಾ, ಈ ರೀತಿಯ ವಿಡಿಯೊದಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ತಂತ್ರಜ್ಞಾನವನ್ನು ಹೇಗೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದನ್ನು ಇದನ್ನು ನೋಡಿದರೆ ಗೊತ್ತಾಗುತ್ತದೆ. ಈ ವಿಚಾರ ನಮ್ಮಲ್ಲಿ ಪ್ರತಿಯೊಬ್ಬರಿಗೂ ಭಯ ತರಿಸಿದೆ ಎಂದಿದ್ದರು.