ಶುಕ್ರವಾರ, ಮಾರ್ಚ್ 31, 2023
26 °C

ಡ್ರಗ್ಸ್‌ ಪ್ರಕರಣ: ಇ.ಡಿ. ಎದುರು ಹಾಜರಾದ ತೆಲುಗು ನಟ ರವಿತೇಜ

ಪಿಟಿಐ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ನಾಲ್ಕು ವರ್ಷಗಳ ಹಿಂದೆ ನಗರದಲ್ಲಿ ನಡೆದಿದ್ದ ‘ಡಗ್ಸ್‌ ಪ್ರಕರಣ‘ಕ್ಕೆ ಸಂಬಂಧಿಸಿದಂತೆ ತೆಲುಗು ಸಿನಿಮಾ ರಂಗದ ಖ್ಯಾತ ನಟ ರವಿತೇಜ ಗುರುವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದರು.

2017ರಲ್ಲಿ ನಡೆದ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಚಾರಣೆಗೆ ಹಾಜರಾಗುವಂತೆ ನಟ ರವಿತೇಜ ಸೇರಿ ತೆಲುಗು ಸಿನಿಮಾ ರಂಗದ ನಟರು ಮತ್ತು ನಿರ್ದೇಶಕರು ಸೇರಿ ಹತ್ತು ಮಂದಿಗೆ ನೋಟಿಸ್‌ ಜಾರಿ ಮಾಡಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಪುರಿ ಜಗನ್ನಾಥ, ನಟಿಯರಾದ ಚಾರ್ಮೀ ಕೌರ್ ಮತ್ತು ರಕುಲ್ ಪ್ರೀತ್ ಸಿಂಗ್‌, ನಟರಾದ ನಂದು ಮತ್ತು ರಾಣಾ ದಗ್ಗುಬಾಟಿ ಅವರು ಈಗಾಗಲೇ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು