‘ಆಪರೇಶನ್ ಅಲಮೇಲ್ಲಮ್ಮ’, ‘ಕವಲುದಾರಿ’ ಮೊದಲಾದ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದ ನಟ ರಿಷಿ ಅಭಿನಯದ ‘ರುದ್ರ ಗರುಡ ಪುರಾಣ’ ಚಿತ್ರ ಜನವರಿ 24ರಂದು ತೆರೆಗೆ ಬರಲಿದೆ. ಈ ಚಿತ್ರದ ‘ಹುಕ್ಕಾ ಹೇಳಿ ಸುಕ್ಕಾ ಹೊಡಿ. ಶೋಕಿ ಮಾಡು ಜೀವನಾನ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ.

ಪ್ರಸ್ತುತ ರಾಜಕೀಯ ವ್ಯವಸ್ಥೆಯನ್ನು ವಿಡಂಬನೆ ಮಾಡುವ ಈ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ. ಮಂಜು ಮಾಂಡವ್ಯ ಸಾಹಿತ್ಯವಿದ್ದು, ಕೆಪಿ ಸಂಗೀತ ನೀಡಿದ್ದಾರೆ. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಈ ಹಿಂದೆ ‘ಡಿಯರ್ ವಿಕ್ರಮ್’ ಚಿತ್ರವನ್ನು ನಿರ್ದೇಶಿಸಿದ್ದ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ರಿಷಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಪ್ರಿಯಾಂಕಾ ಕುಮಾರ್ ರಿಷಿಗೆ ಜೋಡಿಯಾಗಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಂದೀಪ್ ಕುಮಾರ್ ಛಾಯಾಚಿತ್ರಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.