ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್ಸ್ ಚಿತ್ರೋತ್ಸವದಲ್ಲಿ ನಟ ಸಾಧು ಕೋಕಿಲಾ ಭಾಗಿ

ಸಾಧು– ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್‌ ಮುಖಾಮುಖಿ
Published 20 ಮೇ 2024, 13:42 IST
Last Updated 20 ಮೇ 2024, 13:42 IST
ಅಕ್ಷರ ಗಾತ್ರ

ಬೆಂಗಳೂರು: ಫ್ರಾನ್ಸ್‌ನ ಕಾನ್ಸ್ ನಗರದಲ್ಲಿ ನಡೆಯುತ್ತಿರುವ ಪ್ರತಿಷ್ಟಿತ 2024 ನೇ ಸಾಲಿನ ಕಾನ್ಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಕನ್ನಡ ನಟ, ನಿರ್ದೇಶಕ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ಭಾಗಿಯಾಗಿದ್ದಾರೆ.

ಈ ಮಾಹಿತಿಯನ್ನು ಸಾಧು ಕೋಕಿಲಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದೇ ವೇಳೆ ಸಾಧು ಅವರು ಕಾನ್ಸ್ ಚಿತ್ರೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರನ್ನು ಭೇಟಿಯಾಗಿ ಸಂತಸ ಹಂಚಿಕೊಂಡಿದ್ದಾರೆ.

‘ಬಹಳ ವರ್ಷಗಳ ನಂತರ ನಡೆದ ಅಪರೂಪದ ಅನಿರೀಕ್ಷಿತ ಭೇಟಿ.. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಅವರ ಜೊತೆ ಕ್ಯಾನ್ಸ್ ಚಿತ್ರೋತ್ಸವದಲ್ಲಿ ಒಂದು ಕ್ಷಣ. ತುಂಬಾ ವರ್ಷಗಳ ಹಿಂದೆ ಇಬ್ಬರೂ ಒಟ್ಟಿಗೆ ಕೀಬೋರ್ಡ್ ನುಡಿಸುತ್ತಿದ್ದ ದಿನಗಳು ನೆನಪಾದವು!’ ಎಂದು ಬರೆದುಕೊಂಡಿದ್ದಾರೆ.

ಮೇ 14ರಿಂದ ಮೇ 25ರವರೆಗೆ ಕಾನ್ಸ್ ಚಿತ್ರೋತ್ಸವ ಆಯೋಜನೆಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT