ಭಾನುವಾರ, ಅಕ್ಟೋಬರ್ 25, 2020
22 °C

ಶೂಟಿಂಗ್ ವೇಳೆ ನಟ ಶರಣ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಿನಿಮಾ ಶೂಟಿಂಗ್ ವೇಳೆ ಅಸ್ವಸ್ಥರಾದ ನಟ ಶರಣ್ ಅವರನ್ನು ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಪಲ್‌ ಸುನಿ ನಿರ್ದೇಶನದ ‘ಅವತಾರ ಪುರುಷ’ ಚಿತ್ರದ ಚಿತ್ರೀಕರಣದಲ್ಲಿ ಶರಣ್‌ ಶನಿವಾರ ಬೆಳಿಗ್ಗೆ ಪಾಲ್ಗೊಂಡಿದ್ದರು. ಎಚ್‌ಎಂಟಿ ಕಾರ್ಖಾನೆ ಬಳಿ ಚಿತ್ರದ ಕೊನೆಯ‌ ಹಂತದ ಶೂಟಿಂಗ್‌ ನಡೆಯುತ್ತಿತ್ತು. ಸಾಹಸ ದೃಶ್ಯದ ವೇಳೆ ಅವರಿಗೆ‌ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಶರಣ್ ಅವರ ಸಹೋದರಿ ಹಾಗೂ‌ ನಟಿ ಶ್ರುತಿ ಅವರು ಆಸ್ಪತ್ರೆಗೆ ಭೇಟಿ‌ ನೀಡಿ ಸಹೋದರನ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

‘ಹೊಟ್ಟೆನೋವಿನಿಂದ ಶರಣ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರಿಗೆ ಚಿಕಿತ್ಸೆ‌ ನೀಡಿದ್ದಾರೆ. ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ’ ಎಂದು ತಿಳಿಸಿದ್ದಾರೆ.

‘ಹೊಟ್ಟೆನೋವು ಹೆಚ್ಚಾದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಕಿಡ್ನಿಸ್ಟೋನ್ಸ್‌ ಇರುವುದು ಪತ್ತೆಯಾಗಿದೆ. ಶರಣ್‌ಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ‘ಅವತಾರ ಪುರುಷ’ ಚಿತ್ರದ್ದು ಇನ್ನು ಹತ್ತು ದಿನಗಳ ಶೂಟಿಂಗ್‌ ಅಷ್ಟೇ ಬಾಕಿ ಉಳಿದಿದೆ’ ಎಂದು ನಿರ್ದೇಶಕ ಸಿಂಪಲ್ ಸುನಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು