ಸೋಮವಾರ, ಆಗಸ್ಟ್ 15, 2022
20 °C

ರೈತ ಇದ್ರೇನೆ ದೇಶ... ಅನ್ನದಾತರ ಹೋರಾಟಕ್ಕೆ ನಟ ಶಿವರಾಜ್‌ಕುಮಾರ್‌ ಬೆಂಬಲ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೇಶದಾದ್ಯಂತ ನಡೆಸುತ್ತಿರುವ ಹೋರಾಟಕ್ಕೆ ಕನ್ನಡದ ಹಿರಿಯ ನಟ ಶಿವರಾಜ್‌ಕುಮಾರ್‌ ಅವರು ಬುಧವಾರ ಬೆಂಬಲ ಸೂಚಿಸಿದ್ದಾರೆ. 

ಇದನ್ನೂ ಓದಿ: ಸಂಪಾದಕೀಯ: ರೈತರ ಅಹವಾಲು ಆಲಿಸಿ ಆತಂಕ ದೂರ ಮಾಡಿ

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೂರು ಕಾಯ್ದೆಗಳ ಬಗ್ಗೆ ರೈತರಲ್ಲಿ ಅಸಮಾಧಾನ ಮೂಡಿದೆ. ಕೃಷಿ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಪ್ರೋತ್ಸಾಹ ಮತ್ತು ನೆರವು) ಕಾಯ್ದೆ, ಬೆಲೆ ಖಾತರಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಮತ್ತು ರಕ್ಷಣೆ) ಕಾಯ್ದೆ ಮತ್ತು ಕೃಷಿ ಸೇವೆಗಳು ಮತ್ತು ಅಗತ್ಯ ವಸ್ತು ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ರಾಷ್ಟ್ರ ರಾಜಧಾನಿ ದೆಹಲಿಯ ಹೊರ ವಲಯದಲ್ಲಿ ಕಳೆದ 13 ದಿನಗಳಿಂದ ಹೋರಾಟದಲ್ಲಿ ನಿರತರಾಗಿದ್ದಾರೆ.  

ಇದೇ ಹಿನ್ನೆಲೆಯಲ್ಲಿ ಇಂದು (ಡಿ.8) ದೇಶವ್ಯಾಪಿ ಬಂದ್‌ಗೆ ದೇಶದ ರೈತ ಸಂಘಟನೆಗಳು ಕರೆ ನೀಡಿವೆ. ಇದೇ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ನಟ ಶಿವರಾಜ್‌ಕುಮಾರ್‌ 'ರೈತ ದೇಶದ ಬೆನ್ನೆಲುಬು, ರೈತ ಇದ್ರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜೊತೆ ಇರುತ್ತೇವೆ. ಅವರ ಹೋರಾಟಕ್ಕೆ ನಮ್ಮ ಬೆಂಬಲ ಇದೆ,' ಎಂದು ಟ್ವೀಟ್‌ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು