ಗುರುವಾರ , ಮೇ 26, 2022
25 °C

ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ ನಟ ಶ್ರೀಮುರಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರ ನಿಧನದ ಆಘಾತದಿಂದ ಚಿತ್ರರಂಗ ಇನ್ನೂ ಹೊರಬಂದಿಲ್ಲ. ಪ್ರೀತಿಯ ಮಾಮನನ್ನು ಕಳೆದುಕೊಂಡಿರುವ ನಟ ಶ್ರೀಮುರಳಿ ಅವರೂ ಅಪ್ಪು ಅವರ ನೆನಪಿನಲ್ಲೇ ದಿನದೂಡುತ್ತಿದ್ದಾರೆ. ಈ ಕಾರಣದಿಂದಾಗಿಯೇ ಡಿ.17ರಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಶ್ರೀಮುರಳಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನನ್ನ ಪ್ರೀತಿಯ ಅಭಿಮಾನಿಗಳೇ. ಈ ಬಾರಿ ನಿಮ್ಮೊಂದಿಗೆ ನನ್ನ ಜನ್ಮದಿನವನ್ನು ಆಚರಿಸಿಕೊಳ್ಳಲಾಗುವುದಿಲ್ಲ. ಕಾರಣವೇನೆಂದು ನಿಮಗೆ ಗೊತ್ತಿರುವುದೆಂದು ಭಾವಿಸುವೆ. ನಾನು ಬೆಂಗಳೂರಿನಲ್ಲೂ ಇರುವುದಿಲ್ಲ. ಸದಾ ನಿಮ್ಮ ಪ್ರೀತಿ ಹಾಗು ಆಶೀರ್ವಾದವನ್ನು ಬಯಸುವ, ನಿಮ್ಮ, ಶ್ರೀಮುರಳಿ (ಅಭಿಮಾನಿಗಳ ಅಭಿಮಾನಿ)’ ಎಂದು ಉಲ್ಲೇಖಿಸಿದ್ದಾರೆ.

ಶ್ರೀಮುರಳಿ ನಟನೆಯ, ಮಹೇಶ್‌ ಕುಮಾರ್‌ ನಿರ್ದೇಶನದ ‘ಮದಗಜ’ ಚಿತ್ರವು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀಮುರಳಿ ಸೇರಿದಂತೆ ಇಡೀ ಚಿತ್ರತಂಡವು ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು