ಬುಧವಾರ, ಮೇ 18, 2022
23 °C

ಸಾಹಸ ದೃಶ್ಯ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶೂಟಿಂಗ್‌ ವೇಳೆ ನಟ ಶ್ರೀ ಮುರಳಿ ಅವರ ಕಾಲಿಗೆ ಗಾಯವಾಗಿದೆ. ‘ಮದಗಜ’ ಚಿತ್ರದ ಸಾಹಸ ದೃಶ್ಯದ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ಕಾಲಿನ ಮಂಡಿ ಚಿಪ್ಪಿಗೆ ಸ್ವಲ್ಪ ಹಾನಿಯಾಗಿದೆ ಎಂದು ಮುರಳಿ ಅವರ ಆಪ್ತರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ಘಟನೆ ನಡೆದಿದೆ. ತಕ್ಷಣವೆ ಅವರನ್ನು ಸದಾಶಿವ ನಗರದ ಆಸ್ಪತ್ರೆಗೆ ದಾಖಲಿಸಲಾಯಿತು. ಎಂಆರ್‌ಐ ಸ್ಕ್ಯಾನಿಂಗ್‌ ನಡೆಸಲಾಗಿದೆ. ಸದ್ಯ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇನ್ನು 15 ದಿನಗಳಲ್ಲಿ ಅವರು ಶೂಟಿಂಗ್‌ಗೆ ಮರಳಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.

ಮದಗಜ ಕರ್ನಾಟಕ ಸೇರಿ ದೇಶ ಬೇರೆ ಬೇರೆ ಭಾಗಗಳಲ್ಲಿ ಶೂಟಿಂಗ್‌ ನಡೆದಿದೆ. ಕೆಲವು ಭಾಗಗಳ ಚಿತ್ರೀಕರಣ ಬಾಕಿ ಉಳಿದಿತ್ತು. ಫಸ್ಟ್‌ಲುಕ್‌ ಟೀಸರ್‌ ಈಗಾಗಲೇ ಬಿಡುಗಡೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು