ಶುಕ್ರವಾರ, ಜನವರಿ 22, 2021
19 °C

ನಟ ಸನ್ನಿ ಡಿಯೋಲ್‌ಗೆ ಕೊರೊನಾ ಪಾಸಿಟಿವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್ ನಟ, ಗುರುದಾಸ್‌ಪುರ ಸಂಸದ ಸನ್ನಿ ಡಿಯೋಲ್‌ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ ಸನ್ನಿ ಡಿಯೋಲ್‌.

‘ನಾನು ಕೋವಿಡ್‌ ಪರೀಕ್ಷೆ ಮಾಡಿಸಿದ್ದೆ, ನನಗೆ ಪಾಸಿಟಿವ್ ಬಂದಿದೆ. ನಾನು ಈಗ ಮನೆಯಲ್ಲೇ ಇದ್ದೇನೆ. ಆರಾಮಗಿದ್ದೇನೆ. ಸ್ವಲ್ಪ ದಿನಗಳಿಂದೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವವರು ಪರೀಕ್ಷೆ ಮಾಡಿಸಿಕೊಳ್ಳಿ ಹಾಗೂ ಗೃಹಬಂಧನದಲ್ಲಿರಿ’ ಎಂದು ಬರೆದುಕೊಂಡಿದ್ದಾರೆ.

ಸನ್ನಿ ಡಿಯೋಲ್‌ ಇತ್ತೀಚೆಗೆ ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ನಂತರ ಅವರು ಮನಾಲಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದರು. ಮುಂಬೈಗೆ ಹಿಂದಿರುಗುವ ಮೊದಲು ಮನಾಲಿಯಲ್ಲಿ ಪರೀಕ್ಷೆಗೆ ಒಳಗಾಗಿದ್ದರು. ಆಗ ಪಾಸಿಟಿವ್ ಇರುವುದು ಗೊತ್ತಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು