ಸೋಮವಾರ, ಆಗಸ್ಟ್ 8, 2022
25 °C

ನಟಿ ಸ್ವರಾ ಭಾಸ್ಕರ್‌ಗೆ ಕೊಲೆ ಬೆದರಿಕೆ: ತನಿಖೆ ಆರಂಭಿಸಿದ ಪೊಲೀಸರು

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ನಟಿ ಸ್ವರಾ ಭಾಸ್ಕರ್‌ ಅವರಿಗೆ ಜೀವ ಬೆದರಿಕೆ ಪತ್ರ ಬಂದಿದ್ದು ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಈ ಕುರಿತು ‘ಎನ್‌ಡಿಟಿವಿ’ ವರದಿ ಮಾಡಿದೆ. 

ವರ್ಸೊವಾದಲ್ಲಿರುವ ನಟಿಯ ನಿವಾಸಕ್ಕೆ ಪತ್ರವನ್ನು ಕಳುಹಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಎರಡು ದಿನಗಳ ಹಿಂದೆ ಸ್ವರಾ ಭಾಸ್ಕರ್ ಅವರು ವರ್ಸೊವಾ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. 

‘ವೀರ ಸಾವರ್ಕರ್ ಅವರಿಗೆ ಅವಮಾನ ಮಾಡುವುದನ್ನು ದೇಶದ ಯುವಕರು ಸಹಿಸುವುದಿಲ್ಲ’ ಎಂದು ಹಿಂದಿಯಲ್ಲಿ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು