ಭಾನುವಾರ, ಸೆಪ್ಟೆಂಬರ್ 26, 2021
21 °C

ತಮಿಳು ನಟ ಇಳಯದಳಪತಿ ವಿಜಯ್‌ಗೆ ಐಟಿ ಶಾಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳಿನ ಜನಪ್ರಿಯ ನಟ ಇಳಯದಳಪತಿ ವಿಜಯ್‌ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ‘ಮಾಸ್ಟರ್‌‘ ಸಿನಿಮಾ ಚಿತ್ರೀಕರಣದ ಸೆಟ್‌ನಲ್ಲೇ ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಜಯ್‌ ಅಭಿನಯದ ಬಿಗಿಲ್‌ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಸೂಪರ್‌ ಹಿಟ್‌ ಆಗಿತ್ತು. ಈ ಸಿನಿಮಾವನ್ನು ಎಜಿಎಸ್‌ ಸಂಸ್ಥೆ ನಿರ್ಮಾಣ ಮಾಡಿತ್ತು. ಈ ಚಿತ್ರಕ್ಕೆ ಸಂಬಂಧಿಸಿದಂತೆ ತೆರಿಗೆ ವಂಚನೆ ಆರೋಪದಡಿಯಲ್ಲಿ ವಿಜಯ್‌ ಅವರನ್ನು ಐಟಿ ಆಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಐಟಿ ಅಧಿಕಾರಿಗಳು ಎಜಿಎಸ್‌ ಸಂಸ್ಥೆ ಹಾಗೂ ನಿರ್ಮಾಪ‍ಕ ಅನ್ಬು ಚೆಯಾನ್‌ ಅವರ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ ಕೆಲ ಗಂಟೆಗಳಲ್ಲಿ ವಿಜಯ್‌ ಅವರನ್ನು ವಿಚಾರಣೆ ನಡೆಸಿದ್ದಾರೆ. 

ನೈವೇಲಿಯಲ್ಲಿ ವಿಜಯ್‌ ‘ಮಾಸ್ಟರ್‌‘ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಫೈಟಿಂಗ್‌ ದೃಶ್ಯದ ಶೂಟಿಂಗ್‌ ನಡೆಯುತ್ತಿದ್ದ ವೇಳೆ ಸ್ಥಳಕ್ಕೆ ಆಗಮಿಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಮೊದಲಿಗೆ ನೋಟಿಸ್‌ ನೀಡಿ, ಕೆಲ ಹೊತ್ತು ವಿಚಾರಣೆ ನಡೆಸಿದರು ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ. 

ತೆರಿಗೆ ವಂಚನೆ ಆರೋಪದಡಿಯಲ್ಲಿ 2015ರಲ್ಲೂ ವಿಜಯ್‌ ಅವರನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು