ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಬಲರಾಮ..’ನಿಗೆ ಸಂಗೀತದ ಬಲ!

Published 31 ಆಗಸ್ಟ್ 2024, 5:36 IST
Last Updated 31 ಆಗಸ್ಟ್ 2024, 5:36 IST
ಅಕ್ಷರ ಗಾತ್ರ

‘ಆ ದಿನಗಳು’ ಖ್ಯಾತಿಯ ಕೆ‌.ಎಂ.ಚೈತನ್ಯ ನಿರ್ದೇಶನದಲ್ಲಿ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ ‘ಬಲರಾಮನ ದಿನಗಳು’ ತಂಡಕ್ಕೀಗ ಸಂಗೀತದಲ್ಲಿ ದೊಡ್ಡ ಬಲ ಸಿಕ್ಕಿದೆ. ಭಾರತದ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ‌.

‘ಇದು 90 ರ ದಶಕದ ಕಾಲಘಟ್ಟದ ಭೂಗತ ಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಕಾಲ್ಪನಿಕ ಕಥೆ. ಸಂತೋಷ್‌ ನಾರಾಯಣನ್‌ ‘ಕಬಾಲಿ’, ‘ಭೈರವ’ದಿಂದ ಇತ್ತೀಚೆಗೆ ಬಿಡುಗಡೆಗೊಂಡ ‘ಕಲ್ಕಿ’ ಸಿನಿಮಾವರೆಗೂ 50 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕನ್ನಡದಲ್ಲಿ ಅವರ ಮೊದಲ ಚಿತ್ರ’ ಎಂದರು ನಿರ್ದೇಶಕ ಕೆ.ಎಂ.ಚೈತನ್ಯ.

ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಚಿತ್ರದ ನಿರ್ಮಾಪಕರು. ‘ನನ್ನ ತಾಯಿಗೆ ಕನ್ನಡ ಬರುತ್ತದೆ. ಅವರು ನನಗೂ ಸ್ವಲ್ಪ ಕನ್ನಡ ಹೇಳಿಕೊಟ್ಟಿದ್ದಾರೆ. ಬೆಂಗಳೂರಿಗೆ ಆಗಾಗ ಬರುತ್ತಿರುತ್ತೇನೆ. ರಘು ದೀಕ್ಷಿತ್ ಅವರ ‘ನಿನ್ನ ಪೂಜೆಗೆ ಬಂದೆ ಮಾದೇಶ್ವರ’ ಸೇರಿದಂತೆ ಕೆಲವು ಹಾಡುಗಳಿಗೆ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದ್ದೇನೆ. ಅಜನೀಶ್ ಲೋಕನಾಥ್ ಹಾಗೂ ರವಿ ಬಸ್ರೂರ್ ಅವರ ಸಂಗಿತ ಇಷ್ಟ’ ಎಂದರು ಸಂತೋಷ್ ನಾರಾಯಣನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT