ಭಾನುವಾರ, ಮೇ 29, 2022
31 °C
‘ಲಂಕಾಸುರ’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ‘ಲೂಸ್ ಮಾದ’ ಯೋಗಿ

ಟೈಗರ್‌ ಟಾಕೀಸ್‌ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿದ ವಿನೋದ್‌ ಪ್ರಭಾಕರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಟ ದರ್ಶನ್‌ ಅಭಿನಯದ ‘ರಾಬರ್ಟ್‌’ ಸಿನಿಮಾದಲ್ಲಿ ಹೊಸ ಲುಕ್‌ನೊಂದಿಗೆ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಟ ವಿನೋದ್‌ ಪ್ರಭಾಕರ್‌ ಹೊಸ ಇನಿಂಗ್ಸ್‌ ಆರಂಭಿಸಿದ್ದರು. ಚಿತ್ರದಲ್ಲಿನ ವಿನೋದ್‌ ಪಾತ್ರವನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದರು. ಇದೀಗ ‘ಲಂಕಾಸುರ’ನಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿರುವ ವಿನೋದ್‌ ಅವರಿಗೆ ನಟ ‘ಲೂಸ್‌ ಮಾದ’ ಯೋಗಿ ಸಾಥ್‌ ನೀಡಲಿದ್ದಾರೆ.

ಈ ಚಿತ್ರದ ಮುಖಾಂತರ ವಿನೋದ್ ಪ್ರಭಾಕರ್ ಈಗ ನಿರ್ಮಾಪಕರಾಗಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆಗೆ ‘ಟೈಗರ್ ಟಾಕಿಸ್’ ಎಂಬ ಹೆಸರಿಟ್ಟಿರುವ ಅವರು ತಮ್ಮ ತಂದೆ ಟೈಗರ್ ಪ್ರಭಾಕರ್ ಅವರನ್ನು ‌ಸ್ಮರಿಸಿಕೊಂಡು ಹೊಸಹೆಜ್ಜೆ ಇಟ್ಟಿದ್ದಾರೆ. ವಿನೋದ್ ಪ್ರಭಾಕರ್‌ ಅವರ ಪತ್ನಿ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರಾಗಿದ್ದಾರೆ.

‘ಲಂಕಾಸುರ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ‘ಲೂಸ್ ಮಾದ’ ಯೋಗಿ ಅಭಿನಯಿಸುತ್ತಿದ್ದು, ಇದು ಇವರಿಬ್ಬರು ಜೊತೆಯಾಗಿ ಅಭಿನಯಿಸುತ್ತಿರುವ ಮೊದಲ ಚಿತ್ರವಾಗಿದೆ. ದೇವರಾಜ್, ರವಿಶಂಕರ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.

ಆಕ್ಷನ್ ಕಥಾಹಂದರದ ಈ ಚಿತ್ರವನ್ನು ಪ್ರಮೋದ್ ಕುಮಾರ್ ಡಿ. ಎಸ್. ನಿರ್ದೇಶಿಸುತ್ತಿದ್ದಾರೆ.
ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ವಿಜೇತ್ ಕೃಷ್ಣ ಸಂಗೀತ ನೀಡಿದ್ದಾರೆ. ಮುರಳಿ, ಮೋಹನ್‌ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್. ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಬೆಂಗಳೂರಿನಲ್ಲಿ ಈ ಚಿತ್ರದ ಚಿತ್ರೀಕರಣವು ಬಿರುಸಿನಿಂದ ಸಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.