ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮಾರ್ಕ್ ಆ್ಯಂಟನಿ' ಸೆನ್ಸಾರ್‌ಗೆ ₹6.5 ಲಕ್ಷ ಲಂಚ: CBFC ವಿರುದ್ಧ ವಿಶಾಲ್ ಕಿಡಿ

Published 29 ಸೆಪ್ಟೆಂಬರ್ 2023, 5:37 IST
Last Updated 29 ಸೆಪ್ಟೆಂಬರ್ 2023, 5:37 IST
ಅಕ್ಷರ ಗಾತ್ರ

ಚೆನ್ನೈ: ಮಾರ್ಕ್ ಆ್ಯಂಟನಿ ಹಿಂದಿ ಅವತರಣಿಕೆ ಬಿಡುಗಡೆಗೂ ಮುನ್ನ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಷನ್‌ನಿಂದ ಸೆನ್ಸಾರ್ ಪ್ರಮಾಣ ಪತ್ರ ಪಡೆಯಲು ₹6.5 ಲಕ್ಷ ಲಂಚ ನೀಡಿರುವುದಾಗಿ ತಮಿಳು ನಟ ವಿಶಾಲ್ ಹೇಳಿಕೊಂಡಿದ್ದಾರೆ.

ತಮ್ಮ ಆರೋಪಗಳಿಗೆ ಸಂಬಂಧಿಸಿದಂತೆ ಎಲ್ಲ ಪುರಾವೆಗಳನ್ನು ಹೊಂದಿರುವುದಾಗಿ ಅವರು ಹೇಳಿದ್ದಾರೆ. ಸೆಪ್ಟೆಂಬರ್ 15ರಂದು ಬಿಡುಗಡೆಯಾದ ಮಾರ್ಕ್ ಆಂಟನಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಅದರ ಹಿಂದಿ ಆವೃತ್ತಿಯು ಸೆಪ್ಟೆಂಬರ್ 28ರಂದು ತೆರೆ ಕಂಡಿತ್ತು.

ಈ ಕುರಿತಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಗಮನ ಸೆಳೆಯಲು ನಾನು ಇಚ್ಛಿಸುತ್ತೇನೆ. ಚಿತ್ರದ ಸೆನ್ಸಾರ್‌ಗಾಗಿ ಆನ್‌ಲೈನ್‌ನಲ್ಲಿ ನಾವು ಅರ್ಜಿ ಸಲ್ಲಿಸಿದ್ದೆವು. ಆದರೆ, ಸಿಬಿಎಫ್‌ಸಿ ಪ್ರತಿಕ್ರಿಯೆ ಕಂಡು ಬೆಚ್ಚಿಬಿದ್ದೆವು. ನಮ್ಮ ಕಡೆಯ ವ್ಯಕ್ತಿಯೊಬ್ಬರು ಕಚೇರಿಗೆ ಭೇಟಿ ಕೊಟ್ಟಾಗ ಸರ್ಟಿಫಿಕೇಟ್ ನೀಡಲು ₹6.5 ಲಕ್ಷ ಲಂಚ ಕೇಳಿದ್ದಾರೆ. ಚಿತ್ರವನ್ನು ವೀಕ್ಷಿಸಿ ಪರಿಶೀಲನೆ ನಡೆಸಲು ₹3 ಲಕ್ಷ ಮತ್ತು ಸರ್ಟಿಫಿಕೇಟ್ ನೀಡಲು ₹3.5 ಲಕ್ಷ ಕೇಳಿದರು. ಬೇರೆ ದಾರಿ ಇಲ್ಲದೆ ಹಣ ಪಾವತಿಸಿ ಸರ್ಟಿಫಿಕೇಟ್ ಪಡೆದೆ. ಬಳಿಕ, ಚಿತ್ರ ಉತ್ತರ ಭಾರತದಲ್ಲಿ ತೆರೆ ಕಂಡಿತು ಎಂದು ಅವರು ವಿಡಿಯೊ ಸಂದೇಶದಲ್ಲಿ ಹೇಳಿದ್ದಾರೆ. ಇದು ನಿಜಕ್ಕೂ ದುರದೃಷ್ಟಕರ. ಈ ಬಗ್ಗೆ ಉನ್ನತಾಧಿಕಾರಿಗಳು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT