ಸೋಮವಾರ, ಅಕ್ಟೋಬರ್ 3, 2022
24 °C

‘ಮಾರ್ಕ್‌ ಆ್ಯಂಟನಿ‘ ಸಿನಿಮಾ ಚಿತ್ರೀಕರಣದ ವೇಳೆ ನಟ ವಿಶಾಲ್‌ಗೆ ಗಂಭೀರ ಗಾಯ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳಿನ ‘ಮಾರ್ಕ್‌ ಆ್ಯಂಟನಿ‘ ಸಿನಿಮಾದ ಚಿತ್ರೀಕರಣ ವೇಳೆ ನಟ ವಿಶಾಲ್‌ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ವಿಶಾಲ್‌ ನಾಯಕ ನಟನಾಗಿ ಅಭಿನಯಿಸುತ್ತಿರುವ ‘ಮಾರ್ಕ್‌ ಆ್ಯಂಟನಿ‘ ಚಿತ್ರದ ಶೂಟಿಂಗ್‌ ವೇಳೆ ಈ ಅವಘಡ ಸಂಭವಿಸಿದೆ. ಫೈಟ್‌ವೊಂದರ ಚಿತ್ರೀಕರಣ ಸಮಯದಲ್ಲಿ ವಿಶಾಲ್‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣಕ್ಕೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಮಾರ್ಕ್‌ ಆ್ಯಂಟನಿ ಚಿತ್ರತಂಡ ತಿಳಿಸಿದೆ ಎಂದು ತಮಿಳು ಮಾಧ್ಯಮಗಳು ವರದಿ ಮಾಡಿವೆ. 

ಅದಿಕ್ ರವಿಚಂದ್ರನ್ ಮಾರ್ಕ್‌ ಆ್ಯಂಟನಿ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟ ಹಾಗೂ ನಿರ್ದೇಶಕ ಸೂರ್ಯಾ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  

ರಿತು ವರ್ಮ ನಾಯಕಿಯಾಗಿರುವ ಈ ಸಿನಿಮಾಗೆ ಜಿ. ವಿ ಪ್ರಕಾಶ್ ಕುಮಾರ್ ಸಂಗೀತ ನೀಡಿದ್ದಾರೆ. ಈ ಪ್ಯಾನ್ ಇಂಡಿಯಾ ಸಿನಿಮಾವನ್ನು ವಿನೋದ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು