ಸೋಮವಾರ, ಜನವರಿ 18, 2021
25 °C

ಅಶ್ವಥ್‌ನಾರಾಯಣ ಜೊತೆ ತಮಿಳುನಾಡಿನ ದೇವಸ್ಥಾನದಲ್ಲಿ ನಟ ಯಶ್‌: ಫೋಟೊ ವೈರಲ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ರಾಕಿಂಗ್ ಸ್ಟಾರ್ ಯಶ್‌ ಪಾಂಡಿಚೇರಿ ಸಮೀಪ‍ದ ತಿರುನಲ್ಲಾರ್‌ ಶನೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರ ಜೊತೆ ದೇವಾಲಯ‌ಕ್ಕೆ ತೆರಳಿರುವ ಯಶ್‌ ದೇವಾಲಯದ ಅಂಗಣದಲ್ಲಿ ಕುಳಿತಿರುವ ಫೋಟೊ ಸದ್ಯ ವೈರಲ್ ಆಗಿದೆ. ಫೋಟೊದಲ್ಲಿ ಅಶ್ವಥ್‌ನಾರಾಯಣ್ ಹಾಗೂ ಯಶ್‌ ಅಕ್ಕಪಕ್ಕ ಕುಳಿತಿದ್ದಾರೆ. ಈ ಫೋಟೊ ಈಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ತಿರುನಲ್ಲಾರ್ ಶನೀಶ್ವರ ಹಾಗೂ ಧರಬರೇಣ್ಯಶ್ವರ ದೇವಾಲಯಕ್ಕೆ ಭೇಟಿ ನೀಡಿದ್ದ ಯಶ್‌ ಶನಿ ದೇವರ ಆಶೀರ್ವಾದ ಪಡೆದಿದ್ದಾರೆ. ಜನವರಿ 8ಕ್ಕೆ ಈ ನಟ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಕೊರೊನಾ ಕಾರಣದಿಂದ ಚಂದವವನದ ಅನೇಕ ನಟರು ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರೊಂದಿಗೆ ಸರಳವಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಆದರೆ ಯಶ್ ಇಲ್ಲಿಯವರೆಗೆ ತಮ್ಮ ಹುಟ್ಟುಹಬ್ಬದ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಇವರ ಹುಟ್ಟಿದ ದಿನದಿಂದು ಕೆಜಿಎಫ್‌: ಚಾಪ್ಟರ್‌ 2 ರ ಟೀಸರ್‌ ಕೂಡ ಬಿಡುಗಡೆಯಾಗಲಿದೆ.

ಹೈದರಾಬಾದ್‌ನಲ್ಲಿ ಕೆಜಿಎಫ್‌ ಶೂಟಿಂಗ್‌ ಮುಗಿದ ತಕ್ಷಣ ಯಶ್‌ ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಕ್ವಾರಂಟೈನ್‌ನಲ್ಲಿದ್ದರು. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು ಈ ವರ್ಷ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ. ಪ್ರಶಾಂತ್ ನೀಲ್ ನಿರ್ದೇಶನ ಈ ಸಿನಿಮಾದಲ್ಲಿ ಸಂಜಯ್‌ ದತ್‌, ರವೀನಾ ಟಂಡನ್‌, ಶ್ರೀನಿಧಿ ಶೆಟ್ಟಿ, ಪ್ರಕಾಶ್‌ ರಾಜ್‌, ಮಾಳವಿಕಾ ಅವಿನಾಶ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು