ಶನಿವಾರ, ಫೆಬ್ರವರಿ 4, 2023
28 °C

ಉದ್ಯಮಿ ಯಶಸ್‌ ಪಟ್ಲಾ ಜತೆ  ಸಪ್ತಪದಿ ತುಳಿದ ನಟಿ ಅದಿತಿ ಪ್ರಭುದೇವ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಂದನವನದ ನಟಿ ನಟಿ ಅದಿತಿ ಪ್ರಭುದೇವ ಅವರು ಉದ್ಯಮಿ ಯಶಸ್‌ ಪಟ್ಲಾ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅರಮನೆ ಮೈದಾನದಲ್ಲಿ ಸೋಮವಾರ ಅದಿತಿ ಹಾಗೂ ಯಶಸ್‌ ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರ ಸಮ್ಮುಖದಲ್ಲಿ ಸಪ್ತಪದಿ ತುಳಿದರು. ಬೆಳಗ್ಗೆ 9.30ರಿಂದ 10.32ರ ಮುಹೂರ್ತದಲ್ಲಿ ಅದಿತಿ ಮದುವೆ ಆಗಿದ್ದಾರೆ. 

ಅದಿತಿ ಪ್ರಭುದೇವ ಅವರಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ನಿನ್ನೆ (ಭಾನುವಾರ) ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಯಶ್, ರಾಧಿಕಾ ಪಂಡಿತ್, ಶ್ರೀನಗರ ಕಿಟ್ಟಿ, ಮೇಘಾ ಶೆಟ್ಟಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಆರತಕ್ಷತೆಗೆ ಆಗಮಿಸಿ ನವದಂಪತಿಗೆ ಶುಭಾಶಯ ಕೋರಿದರು. 

ಆರತಕ್ಷತೆ ಹಾಗೂ ಮದುವೆಯ ವಿಡಿಯೊ, ಫೋಟೊಗಳನ್ನು ಅದಿತಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊ, ವಿಡಿಯೊಗಳನ್ನು ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದಾರೆ. ಅದಿತಿಯ ಮದುವೆ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಅದಿತಿ ಪ್ರಭುದೇವ ನಟನೆಯ ‘ತ್ರಿಬಲ್ ರೈಡಿಂಗ್’ ಸಿನಿಮಾ ಬಿಡುಗಡೆಯಾಗಿದ್ದು ಚಂದನವನದಲ್ಲಿ ಮೆಚ್ಚುಗೆ ಪಡೆದುಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು