ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜನ್ಮದಿನದ ಸಂಭ್ರಮದಲ್ಲಿ ನಟಿ ಅಮೂಲ್ಯ: ಅಭಿಮಾನಿಗಳಿಂದ ಶುಭಾಶಯಗಳು

ಚಂದನವನದ ನಟಿಅಮೂಲ್ಯ ಇಂದು (ಸೆ.14) ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅವರಿಗೆ ಸಿನಿಮಾ ಕ್ಷೇತ್ರದ ಗಣ್ಯರು ಹುಟ್ಟುಹಬ್ಬದ ಶುಭಾಶಯಗಳನ್ನು ಹೇಳುತ್ತಿದ್ದಾರೆ.

ಅಮೂಲ್ಯ ಪತಿ ಜಗದೀಶ್‌ ಅವರು,‘ನನಗೆ ಸೆಪ್ಟೆಂಬರ್ 14 ವ್ಯಾಲೆಂಟೈನ್ ಡೇ. ಹುಟ್ಟುಹಬ್ಬದ ಶುಭಾಶಯಗಳು ಅಮೂಲ್ಯ. ನೀನು ಯಾವಾಗಲೂ ಮಿನುಗುವ ನಕ್ಷತ್ರವಾಗಿರಬೇಕು‘ ಎಂದು ಶುಭಾಶಯ ಕೋರಿದ್ದಾರೆ.

ಚಂದನವನದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಭಿಮಾನಿಗಳು ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಿದ್ದಾರೆ. ಕೆಲವರು ನಿಮ್ಮ ಹೊಸ ಸಿನಿಮಾ ಯಾವಾಗ ಎಂದು ಕೇಳುತ್ತಿದ್ದಾರೆ.

ಬಾಲ ನಟಿಯಾಗಿಚಿತ್ರರಂಗ ಪ್ರವೇಶ ಮಾಡಿದ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ನಾಯಕಿಯಾದರು. ಈ ಸಿನಿಮಾ ಅವರಿಗೆ ಯಶಸ್ಸು ತಂದುಕೊಟ್ಟಿತ್ತು. ನಂತರ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡರು.

ಯಶ್, ಚಿರಂಜೀವಿ ಸರ್ಜಾ, ನೆನಪಿರಲಿ ಪ್ರೇಮ್, ದುನಿಯಾ ವಿಜಯ್, ಕೃಷ್ಣ ಅಜಯ್ ರಾವ್ ಸೇರಿದಂತೆ ಸ್ಟಾರ್‌ ನಟರ ಜೊತೆ ನಟಿಸಿದರು. ಅವರು ಮದುವೆಯ ಬಳಿಕ ನಾಯಕಿಯಾಗಿ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT