ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದರ ಪರಿಣಾಮ, ನಟಿ ಹಾಗೂ ರೂಪದರ್ಶಿ ಹರ್ಷಿಲ್ ಕಾಲಿಯಾ ಅವರು ಮೃತಪಟ್ಟಿದ್ದಾರೆ.

ನಟಿ ಹರ್ಷಿಲ್ ಕಾಲಿಯಾ (30) ಅವರು ರಾತ್ರಿ 11:30ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಜೈಪುರದ ಶಿಪ್ರಾ ಪಾತ್ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರದಲ್ಲಿ ಸೆರಿಯಾಗಿದೆ.

ಸ್ಥಳೀಯ ನಿವಾಸಿಗಳು ಕಾಲಿಯಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ ತಲೆಗೆ ಅತೀವ ಪೆಟ್ಟು ಬಿದ್ದ ಕಾರಣ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಲಿಯಾ ಅವರು ‘ಕ್ರೈಂ ನೆಕ್ಸ್ಟ್ ಡೋರ್’ ವೆಬ್ ಸರಣಿಯಲ್ಲಿ ಕೆಲಸ ಮಾಡಿದ್ದರು. ಅಲ್ಲದೆ ಸುದ್ದಿ ವಾಹಿನಿಯಲ್ಲಿ ನಿರೂಪಕಿಯಾಗಿ, ಹಲವು ಹಾಡುಗಳಲ್ಲಿಯೂ ನಟಿಸಿದ್ದರು. ಮಾಡೆಲಿಂಗ್ ಕ್ಷೇತ್ರದಲ್ಲಿಯೂ ಮಿಂಚಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.