ಮಂಗಳವಾರ, ಸೆಪ್ಟೆಂಬರ್ 21, 2021
26 °C

ಮದುಮಗಳು ಯಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಲಿವುಡ್ ಚಿತ್ರರಂಗದ ಜನಪ್ರಿಯ ನಟಿ ಯಾಮಿ ಗೌತಮ್ ವೈವಿಧ್ಯಮಯ ಪಾತ್ರಗಳಲ್ಲಿ ಗುರುತಿಸಿಕೊಂಡವರು. ಜನವರಿ ತಿಂಗಳಲ್ಲಿ ಬಿಡುಗಡೆಯಾದ ‘ಉರಿ’ ಸಿನಿಮಾದಲ್ಲಿ ಗುಪ್ತಚರ ಇಲಾಖೆ ಅಧಿಕಾರಿಯಾಗಿ ನಟಿಸಿದ್ದ ಯಾಮಿ ಅಭಿನಯಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು.

ಈಗ ‘ಗಿನ್ನಿ ವೆಡ್ಸ್‌ ಸನ್ನಿ’ ಎಂಬ ಹಾಸ್ಯದ ಜೊತೆಗೆ ಪ್ರೇಮಕತೆಯುಳ್ಳ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ವಿಕ್ರಾಂತ್‌ ಮೆಸ್ಸಿ ಅವರ ಜೊತೆ ನಾಯಕಿಯಾಗಿ ನಟಿಸುತ್ತಿದ್ದಾರೆ. 

ಈ ಚಿತ್ರದ ಚಿತ್ರೀಕರಣ ಆರಂಭವಾಗಬೇಕಷ್ಟೇ. ಈ ಚಿತ್ರದಲ್ಲಿ ತನ್ನ ಫಸ್ಟ್‌ಲುಕ್‌ ಅನ್ನು ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಚಿತ್ರದ ಶೀರ್ಷಿಕೆ ಸೂಚಿಸುವಂತೆ ಇದು ಮದುವೆ ಕತೆಯನ್ನೊಳಗೊಂಡಿದೆ ಎನ್ನಲಾಗಿದೆ. ಇದಕ್ಕೆ ಪುರಾವೆಯೆಂಬಂತೆ ನಟಿ ಬಿಡುಗಡೆ ಮಾಡಿರುವ ಫೋಟೊದಲ್ಲೂ ಮದುಮಗಳ ವಸ್ತ್ರದಲ್ಲಿ ಮಿಂಚುತ್ತಿದ್ದಾರೆ. ‘ಹಸಿರು ಬಣ್ಣದ ವಸ್ತ್ರದಲ್ಲಿ ನಟಿ ಸೌಂದರ್ಯ ಕಣ್ಣುಕುಕ್ಕುವಂತಿದೆ’ ಎಂದು ಕೆಲವರು ಪ್ರತಿಕ್ರಿಯಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು