ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಜ್ರದ ಕಿವಿಯೋಲೆ ಕಳೆದುಕೊಂಡ ನಟಿ ಜೂಹಿ ಚಾವ್ಲಾ: ಹುಡುಕಿ ಕೊಡಲು ಮನವಿ

Last Updated 14 ಡಿಸೆಂಬರ್ 2020, 10:54 IST
ಅಕ್ಷರ ಗಾತ್ರ

ಬಾಲಿವುಡ್‌ನ ಖ್ಯಾತ ನಟಿ ಜೂಹಿ ಚಾವ್ಲಾ ಮುಂಬೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಮ್ಮ ವಜ್ರದ ಕಿವಿಯೋಲೆಯನ್ನು ಕಳೆದುಕೊಂಡಿದ್ದಾರೆ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಜೂಹಿ ಹುಡುಕಿಕೊಟ್ಟವರಿಗೆ ಬಹುಮಾನ ಕೊಡುವುದಾಗಿ ತಿಳಿಸಿದ್ದಾರೆ.

‘ಇವತ್ತು ಬೆಳಿಗ್ಗೆ ಮುಂಬೈನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್‌ 8ರ ಬಳಿಗೆ ನಡೆದುಕೊಂಡು ಹೋಗಿದ್ದೆ. ಎಮಿರೇಟ್ಸ್ ಕೌಂಟರ್ ಬಳಿ ಭದ್ರತಾ ಸಿಬ್ಬಂದಿಯಿಂದ ತಪಾಸಣೆ ಮಾಡಿಕೊಂಡು ಮುಂದೆ ಹೋಗುತ್ತಿದ್ದಾಗ ನನ್ನ ವಜ್ರದ ಕಿವಿಯೋಲೆ ಎಲ್ಲೋ ಬಿದ್ದು ಹೋಗಿದೆ. ಯಾರಿಗಾದರೂ ಸಿಕ್ಕಿದ್ದರೆ ದಯವಿಟ್ಟು ಅದನ್ನು ನನಗೆ ಮರಳಿ ಕೊಡಿ. ನಾನು ಅದನ್ನು ಕಳೆದ 15 ವರ್ಷಗಳಿಂದ ಬಳಸುತ್ತಿದ್ದೇನೆ. ಹುಡುಕಿ ಕೊಟ್ಟವರಿಗೆ ಬಹುಮಾನ ಕೊಡುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಜೂಹಿ ಚಾವ್ಲಾ ಹಿಂದಿ, ಕನ್ನಡ, ತಮಿಳು, ತೆಲುಗು, ಬಂಗಾಳಿ, ಮಲಯಾಳಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ರವಿಚಂದ್ರನ್ ಜೊತೆ ನಟಿಸಿದ್ದ ಪ್ರೇಮಲೋಕ ಸಿನಿಮಾ ಸೂಪರ್ ಹಿಟ್ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT