ಶನಿವಾರ, ಮಾರ್ಚ್ 25, 2023
22 °C

ಅಕ್ಷಯ್ ಕುಮಾರ್ ಕಾಲುಮುಟ್ಟಿ ನಮಸ್ಕರಿಸಿದ ಕತ್ರೀನಾ ಕೈಫ್!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಬಾಲಿವುಡ್ ಜನಪ್ರಿಯ ನಟ ಅಕ್ಷಯ್ ಕುಮಾರ್ ಮತ್ತು ಕತ್ರೀನಾ ಕೈಫ್ ಅವರ ಅಭಿನಯದ ಸೂರ್ಯವಂಶಿ ಚಿತ್ರ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.

ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಅಕ್ಷಯ್ ಕುಮಾರ್ ಮತ್ತು ಕತ್ರೀನಾ ಕೈಫ್, ಕಪಿಲ್ ಶರ್ಮಾ ಶೋದಲ್ಲಿ ಕಾಣಿಸಿಕೊಂಡಿದ್ದಾರೆ.

ವಿಶೇಷ ಏನೆಂದರೆ, ಕಪಿಲ್ ಶರ್ಮಾ ಶೋದಲ್ಲಿ ನಟ ಅಕ್ಷಯ್ ಕುಮಾರ್ ಅವರ ಕಾಲನ್ನು ಕತ್ರೀನಾ ಕೈಫ್ ಮುಟ್ಟಿ ನಮಸ್ಕರಿಸಿದ್ದಾರೆ.

ಇದಕ್ಕೆ ಕಾರಣವಾಗಿದ್ದು, ಅಕ್ಷಯ್ ಕುಮಾರ್ ಅವರು ನೀಡಿರುವ ದೂರು! ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನೂ ಕತ್ರೀನಾ ಸ್ವಾಗತಿಸಿದ್ದಾರೆ, ಆದರೆ ನನ್ನನ್ನು ಕಡೆಗಣಿಸಿದ್ದಾರೆ ಎನ್ನುವುದು ಅಕ್ಷಯ್ ಕುಮಾರ್ ಆರೋಪವಾಗಿದೆ.

ಅದಕ್ಕಾಗಿ, ಅಕ್ಷಯ್ ಕುಮಾರ್, ಕಪಿಲ್ ಶರ್ಮಾ ಬಳಿ ದೂರು ನೀಡಿದ್ದಾರೆ.

ಈ ವಿಚಾರ ಚರ್ಚೆಗೆ ಕಾರಣವಾಗುತ್ತಿದ್ದಂತೆ, ಕತ್ರೀನಾ ಅವರು ಅಕ್ಷಯ್ ಕುಮಾರ್ ಕಾಲು ಮುಟ್ಟಿ ನಮಸ್ಕರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು