ಶುಕ್ರವಾರ, ಮೇ 20, 2022
26 °C

ಕೋವಿಡ್‌: ನಟಿ ಕೀರ್ತಿ ಸುರೇಶ್‌ ಚೇತರಿಕೆ, ಶೀಘ್ರ ಚಿತ್ರೀಕರಣಕ್ಕೆ ಮರಳಲು ಸಿದ್ಧತೆ

ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಚೆನ್ನೈ: ಬಹುಭಾಷಾ ನಟಿ ಕೀರ್ತಿ ಸುರೇಶ್‌ ಅವರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನೆಗೆಟಿವ್’ ಎಂದರೆ ಇತ್ತೀಚಿನ ದಿನಗಳಲ್ಲಿ ಧನಾತ್ಮಕ ವಿಷಯವಾಗಿದೆ. ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ನೀವು (ಅಭಿಮಾನಿಗಳು) ಪೊಂಗಲ್ ಮತ್ತು ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದೀರಿ ಎಂದು ನಾನು ಭಾವಿಸುತ್ತೇನೆ!’ ಎಂದು ಬರೆದುಕೊಂಡಿದ್ದಾರೆ.

ಕೀರ್ತಿ ಸುರೇಶ್ ಅವರಿಗೆ ಜ.11 ರಂದು ಕೋವಿಡ್‌ ದೃಢಪಟ್ಟಿತ್ತು. ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿರುವುದಾಗಿ ಅವರು ಹೇಳಿದ್ದರು.

ಲಸಿಕೆ ಪಡೆದು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಅಭಿಮಾನಿಗಳಿಗೆ ಕೀರ್ತಿ ಮನವಿ ಮಾಡಿದ್ದರು.

ತೆಲುಗು ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಭೋಲಾ ಶಂಕರ್’ ಚಿತ್ರದಲ್ಲಿ ಕೀರ್ತಿ ಬ್ಯುಸಿಯಾಗಿದ್ದಾರೆ. ಜತೆಗೆ ಮಹೇಶ್‌ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಚಿತ್ರದಲ್ಲೂ ಕೀರ್ತಿ ಕಾಣಿಸಿಕೊಂಡಿದ್ದು, ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

ಓದಿ... ಸಲ್ಮಾನ್‌ ರಾತ್ರಿ 12 ಗಂಟೆಯ ನಂತರ ಫೋನ್ ಮಾಡುತ್ತಾರೆ: ಲಾರಾ ದತ್ತಾ ಹೇಳಿದ್ದೇನು?

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು