ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ನಟಿ ಮಾಲಾಶ್ರೀ ಪತಿ ಹಾಗೂ ನಿರ್ಮಾಪಕ ರಾಮು ಅಂತ್ಯಕ್ರಿಯೆ

Last Updated 27 ಏಪ್ರಿಲ್ 2021, 8:36 IST
ಅಕ್ಷರ ಗಾತ್ರ

ತುಮಕೂರು: ಕೋವಿಡ್‌ನಿಂದ ಮೃತಪಟ್ಟ ನಿರ್ಮಾಪಕ ಹಾಗೂ ನಟಿ ಮಾಲಾಶ್ರೀ ಪತಿ ರಾಮು ಅಂತ್ಯಕ್ರಿಯೆ ಕುಣಿಗಲ್ ತಾಲ್ಲೂಕಿನ ಕೊಡಗಿಹಳ್ಳಿ ಗ್ರಾಮದಲ್ಲಿರುವ ತೋಟದಲ್ಲಿ ಮಂಗಳವಾರ ಮಧ್ಯಾಹ್ನ ನೆರವೇರಿತು. ಕೋವಿಡ್ ನಿಯಮದಂತೆ ಅಂತ್ಯ ಸಂಸ್ಕಾರ ಮಾಡಲಾಯಿತು.

ರಾಮು ಪಾರ್ಥೀವ ಶರೀರಕ್ಕೆ ಮಾಲಾಶ್ರೀ ಅಂತಿಮ ನಮನ ಸಲ್ಲಿಸಿದರು. ಪುತ್ರ ಆರ್ಯನ್ ಅಂತ್ಯ ಸಂಸ್ಕಾರದ ವಿಧಿಗಳನ್ನು ನೆರವೇರಿಸಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಪುತ್ರಿ ಅನನ್ಯ ಇದ್ದರು.

ಕೋವಿಡ್‌ನಿಂದ ಬಳಲುತ್ತಿದ್ದ ಚಿತ್ರ ನಿರ್ಮಾಪಕ, ನಟಿ ಮಾಲಾಶ್ರೀ ಅವರ ಪತಿ ರಾಮು (52) ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ನಿಧನ ಹೊಂದಿದ್ದರು. ಸೋಂಕು ಪೀಡಿತರಾಗಿದ್ದ ಅವರು ಏ. 24ರಂದು ನಗರದ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು.

ಮೂಲತಃ ಕುಣಿಗಲ್‌ನವರಾಗಿದ್ದ ರಾಮು ಅವರು ದೊಡ್ಡ ಬಜೆಟ್‌ನ ನಿರ್ಮಾಪಕರು (ಕೋಟಿ ರಾಮು) ಎಂದೇ ಖ್ಯಾತರಾಗಿದ್ದವರು. ಅವರಿಗೆ ಪತ್ನಿ ಮಾಲಾಶ್ರೀ, ಪುತ್ರಿ ಅನನ್ಯಾ, ಪುತ್ರ ಆರ್ಯನ್‌ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT