ಸೋಮವಾರ, ಅಕ್ಟೋಬರ್ 26, 2020
29 °C

ಮಗುವಾಯಿತೆಂದು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದ ನಟಿ ಮೇಘನಾ ರಾಜ್

. Updated:

ಅಕ್ಷರ ಗಾತ್ರ : | |

Prajavani

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಯೂಟ್ಯೂಬ್‌ ಚಾನೆಲ್‌ಗಳ ವಿರುದ್ಧ ನಟಿ ಮೇಘನಾ ರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಸುದ್ದಿಗಳನ್ನು ಯಾವುದೇ ಕಾರಣಕ್ಕೂ ಅಭಿಮಾನಿಗಳು ನಂಬಬಾರದು. ನನಗೆ ಸಂಬಂಧಪಟ್ಟ ಯಾವುದೇ ವಿಷಯವಿದ್ದರೂ ನಮ್ಮ ಕುಟುಂಬವೇ ನೇರವಾಗಿ ನಿಮ್ಮೊಂದಿಗೆ ಮಾಹಿತಿ ಹಂಚಿಕೊಳ್ಳಲಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಚಿರಂಜೀವಿ ಸರ್ಜಾ ಅವರ ನಿಧನದ ನಂತರ ಸರ್ಜಾ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು ನಡೆಯುತ್ತಿದೆ. ಇದಕ್ಕೆ ಸರ್ಜಾ ಕುಟುಂಬ ಅಸಮಾಧಾನವನ್ನೂ ವ್ಯಕ್ತಪಡಿಸಿದೆ. ಗರ್ಭಿಣಿಯಾಗಿರುವ ಮೇಘನಾ ರಾಜ್‌ ಅವರ ಹೆರಿಗೆ ವಿಚಾರವಾಗಿ ಈಗ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.

ಇದೀಗ ಬಂದ ಸುದ್ದಿ; ಎರಡು ಗಂಡುಮಕ್ಕಳ ಜೊತೆ ಅತ್ತಿಗೆ ಮೇಘನಾ ಧ್ರುವ, ಮೇಘನಾ ಪರಿಸ್ಥಿತಿ ಏನಾಗಿದೆ? ಮಗು ಹಿಡಿದು ಕಣ್ಣೀರು ಹಾಕಿದ ಧ್ರುವ... ಇಂತಹ ಶೀರ್ಷಿಕೆಯಡಿ ಸುಳ್ಳು ಸುದ್ದಿ ಬಿತ್ತರಿಸಲಾಗುತ್ತಿದೆ. ಯೂಟ್ಯೂಬ್‌ನಲ್ಲಿ ಬಿತ್ತರಗೊಂಡಿರುವ ಇಂತಹ ಸುದ್ದಿಯ ಸ್ಕ್ರೀನ್ ಶಾಟ್ ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಮೇಘನಾ, ಯಾವುದೇ ಕಾರಣಕ್ಕೂ ಅಭಿಮಾನಿಗಳು ಇದನ್ನು ನಂಬಬಾರದು ಎಂದು ಕೋರಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು