ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಮಗುವಿನ ನಿರೀಕ್ಷೆಯಲ್ಲಿ ಮಿಲನಾ ನಾಗರಾಜ್–ಡಾರ್ಲಿಂಗ್ ಕೃಷ್ಣ ದಂಪತಿ

Published 8 ಮಾರ್ಚ್ 2024, 7:53 IST
Last Updated 8 ಮಾರ್ಚ್ 2024, 7:53 IST
ಅಕ್ಷರ ಗಾತ್ರ

ಬೆಂಗಳೂರು: ಚಂದನವನದ ತಾರೆಯರಾದ ನಟಿ ಮಿಲನಾ ನಾಗರಾಜ್‌ ಮತ್ತು ಡಾರ್ಲಿಂಗ್‌ ಕೃಷ್ಣ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಬಗ್ಗೆ ಮಿಲನಾ ನಾಗರಾಜ್‌ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಹೇಳಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ 'Krissmi Baby' ಎಂದು ಬರೆದುಕೊಂಡಿರುವ ಮಗುವಿನ ಟೀಶರ್ಟ್ ಫೋಟೋ ಹಂಚಿಕೊಂಡಿರುವ ಮಿಲನಾ, ‘ನಮ್ಮಿಬ್ಬರನ್ನು ಆಶೀರ್ವದಿಸಿ’ ಎಂದು ಹೇಳಿದ್ದಾರೆ. ಅಲ್ಲದೇ ಸೆಪ್ಟೆಂಬರ್‌ನಲ್ಲಿ ಮಗುವಿನ ಆಗಮನವಾಗುವುದು ಎಂದು ಕೂಡ ಹೇಳಿದ್ದಾರೆ.

ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ 3 ವರ್ಷಗಳ ಹಿಂದೆ ಪ್ರೇಮಿಗಳ ದಿನದಂದು ವಿವಾಹವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT