ಭಾನುವಾರ, ಅಕ್ಟೋಬರ್ 24, 2021
27 °C

ಕೋವಿಡ್ ಲಸಿಕೆ ಅಭಿಯಾನಕ್ಕೆ ಕೈಜೋಡಿಸಿದ ನಟಿ ಪ್ರಣೀತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿನಿಮಾ ಹಾಗೂ ಸಾಮಾಜಿಕ ಕೆಲಸಗಳ ಮೂಲಕ ಗುರುತಿಸಿಕೊಂಡಿರುವ ನಟಿ ಪ್ರಣೀತಾ ಕೊವೀಡ್ ಸಮಯದಲ್ಲಿ ಜನರಿಗೆ ನೆರವಾಗಿದ್ದಾರೆ.

ಲಸಿಕೆ ಅಭಿಯಾನ ದಿನದಂದು ಜಯನಗರದಲ್ಲಿ ಪ್ರಣೀತಾ ಪೌಂಡೇಶನ್ ಹಾಗೂ ರಾಷ್ಟ್ರೋತ್ಥಾನ ಪರಿಷತ್ ಉಚಿತವಾಗಿ ಲಸಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದವು

ತಮ್ಮ ಫೌಂಡೇಶನ್ ವತಿಯಿಂದ ಲಸಿಕೆ ಅಭಿಯಾನ ನಡೆಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಈ ಕುರಿತು ’ಕೊ’ ಮಾಡಿರುವ ಪ್ರಣೀತಾ ತಮ್ಮ ಫೌಂಡೇಶನ್ ನಿಂದ ನಡೆದ ಲಸಿಕೆ ಅಭಿಯಾನದ ವಿಡಿಯೋ ಹಂಚಿಕೊಂಡಿದ್ದಾರೆ.

ಹಲವರು ಈ ಅಭಿಯಾನದಲ್ಲಿ ಲಸಿಕೆ ಪಡೆದುಕೊಂಡಿದ್ದು, ಆ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಜನರು ಪ್ರಣೀತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅಭಿಮಾನಿಗಳು ಫೋಟೊಗಳನ್ನು ಶೇರ್ ಮಾಡಿಕೊಂಡು ಸಂಭ್ರಮಿಸುತ್ತಿದ್ದಾರೆ.

ಈ ಹಿಂದೆ ವಿಷ್ಣುವರ್ಧನ್ ಓದಿದ ಶಾಲೆ ಶಾಶ್ವತವಾಗಿ ಮುಚ್ಚಿಹೋಗುವ ಸಂಗತಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರಣೀತಾ ಶಾಲೆ ಉಳಿಸಲು ನೆರವಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು