ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಶ್ ಜತೆಗೆ ನಿಶ್ಚಿತಾರ್ಥ: ನೆನಪುಗಳನ್ನು ಹಂಚಿಕೊಂಡ ರಾಧಿಕಾ ಪಂಡಿತ್

Last Updated 12 ಆಗಸ್ಟ್ 2021, 12:53 IST
ಅಕ್ಷರ ಗಾತ್ರ

ಬೆಂಗಳೂರು: ಚಂದನವನದ ಜನಪ್ರಿಯ ದಂಪತಿ ರಾಧಿಕಾ ಪಂಡಿತ್ ಮತ್ತು ಯಶ್ ನಿಶ್ಚಿತಾರ್ಥವಾಗಿ ಇಂದಿಗೆ ಐದು ವರ್ಷವಾಯಿತು. ಈ ಬಗ್ಗೆ ನಟಿ ರಾಧಿಕಾ ಪಂಡಿತ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಕಿರು ವಿಡಿಯೊ ಒಂದನ್ನು ಪೋಸ್ಟ್ ಮಾಡಿದ್ದಾರೆ.

ನಿಶ್ಚಿತಾರ್ಥದ ಐದನೇ ವರ್ಷಾಚರಣೆಯ ಸಂದರ್ಭದಲ್ಲಿ ಸವಿನೆನಪುಗಳು ಎಂದು ಯಶ್ ಬಗ್ಗೆ ಬರೆದು ರಾಧಿಕಾ ವಿಡಿಯೊ ಪೋಸ್ಟ್ ಮಾಡಿದ್ದಾರೆ.

ಯಶ್ ಮತ್ತು ರಾಧಿಕಾ ದಂಪತಿಗೆ ಆಯ್ರಾ ಮತ್ತು ಯಥರ್ವ್ ಎಂಬ ಎರಡು ಮುದ್ದಾದ ಮಕ್ಕಳಿದ್ದಾರೆ. ರಾಧಿಕಾ ಈ ಇಬ್ಬರೂ ಪುಟಾಣಿಗಳ ವಿಡಿಯೊ, ಫೋಟೊಗಳನ್ನು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ನಿಶ್ಚಿತಾರ್ಥದ ಸಂದರ್ಭವನ್ನು ನೆನಪಿಸಿಕೊಂಡಿರುವ ನಟಿ ರಾಧಿಕಾ ಪಂಡಿತ್, ನನಗಿನ್ನೂ ಆ ದಿನ, ಆ ಕ್ಷಣಗಳು ಚೆನ್ನಾಗಿ ನೆನಪಿದೆ. ನಿನ್ನೆ, ಮೊನ್ನೆಯಷ್ಟೇ ನಡೆದಂತಿದೆ ಎಂದು ಹೇಳಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT