ಸೋಮವಾರ, ಅಕ್ಟೋಬರ್ 26, 2020
28 °C

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನಟಿ ರಾಗಿಣಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿ ದ್ವಿವೇದಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅನುಮತಿ ಕೋರಿ ನಗರದ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

‘ಬೆನ್ನು ನೋವು ಸೇರಿ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ. ಜೈಲಿನಲ್ಲಿರುವ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಾಗುತ್ತಿಲ್ಲ. ಗುಣಮಟ್ಟದ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು ಅವಕಾಶ ನೀಡಿ’ ಎಂದು ಅರ್ಜಿಯಲ್ಲಿ ರಾಗಿಣಿ ಕೋರಿದ್ದಾರೆ.

ಅರ್ಜಿಗೆ ಆಕ್ಷೇಪ ಸಲ್ಲಿಸಿರುವ ಸಿಸಿಬಿ ಪರ ವಕೀಲರು, ‘ಅರ್ಜಿದಾರರಿಗೆ ಆರೋಗ್ಯ ಸಮಸ್ಯೆ ಇರುವ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಿಲ್ಲ. ಅರ್ಜಿಯನ್ನು ವಜಾಗೊಳಿಸಬೇಕು’ ಎಂದು ವಿನಂತಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಅ.16ಕ್ಕೆ ಮುಂದೂಡಲಾಗಿದೆ.

ರವಿಶಂಕರ ವಿಚಾರಣೆ; ಜೈಲಿನಲ್ಲಿದ್ದ ರಾಗಿಣಿ ಅವರ ಸ್ನೇಹಿತ ಬಿ.ಕೆ.ರವಿಶಂಕರ್‌ನನ್ನು ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ವಿಚಾರಣೆ ಮುಂದುವರಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು