ಬೆಂಗಳೂರು: ಇತ್ತೀಚೆಗಷ್ಟೇ ‘ರಾಜಕೀಯ ಈಗ ಮುಗಿದುಹೋದ ಪ್ರಯಾಣ’ ಎಂದು ಹೇಳಿ ಸುದ್ದಿಯಾಗಿದ್ದ ನಟಿ, ಮಾಜಿ ಸಂಸದೆ ರಮ್ಯಾ, ಇದೀಗ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದಿರುವ ರಮ್ಯಾ, ‘ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿಯನ್ನು ನಾನು ಯಾವಾಗಲೂ ಮೆಚ್ಚಿದ್ದೇನೆ. ಈಗಲೂ ಮೆಚ್ಚಿಕೊಳ್ಳುತ್ತೇನೆ. ಆದರೆ ಇಂದಿನ ರಾಜಕೀಯ, ಉತ್ತಮ ಕೆಲಸಗಳನ್ನು ಮಾಡುತ್ತಿರುವ ಪ್ರಾಮಾಣಿಕ ಅಧಿಕಾರಿಗಳನ್ನು ಪ್ರೋತ್ಸಾಹಿಸುತ್ತಿಲ್ಲ ಮತ್ತು ಬೆಂಬಲಿಸುತ್ತಿಲ್ಲ ಎನ್ನುವ ನಿರಾಶೆ ಇದೆ’ ಎಂದು ಉಲ್ಲೇಖಿಸಿದ್ದಾರೆ. ಇದರ ಜೊತೆಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ರೋಹಿಣಿ ಸಿಂಧೂರಿ ಅವರು ನೀಡಿದ ಸಂದರ್ಶನದ ತುಣುಕು ಅಪ್ಲೋಡ್ ಮಾಡಿದ್ದಾರೆ.

ಇದರಲ್ಲಿ ವರ್ಗಾವಣೆ ನಿರೀಕ್ಷೆ ಮಾಡಿದ್ರಾ ಎನ್ನುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿರುವ ರೋಹಿಣಿ ಸಿಂಧೂರಿ, ‘ಇಲ್ಲ, ನಿರೀಕ್ಷೆ ಮಾಡಿರಲಿಲ್ಲ. ಎಂಟು ತಿಂಗಳಲ್ಲಿ ಒಳ್ಳೆಯ ಕೆಲಸ ಮಾಡುತ್ತಿರುವಾಗ, ಕೋವಿಡ್ ಪ್ರಕರಣಗಳು ಇಳಿಕೆಯಾಗುತ್ತಿರುವಾಗ, ರಾಜ್ಯದಲ್ಲೇ ಅತಿ ಹೆಚ್ಚು ಲಸಿಕೆಯನ್ನು ನೀಡಿರುವಾಗ, ತಾಲ್ಲೂಕು ಮಟ್ಟದಲ್ಲಿ ಒಳ್ಳೆಯ ಕೆಲಸವಾಗುತ್ತಿರುವಾಗ, ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿರುವಾಗ ವರ್ಗಾವಣೆ ನಿರೀಕ್ಷೆ ಮಾಡಿರಲಿಲ್ಲ’ ಎಂದಿದ್ದಾರೆ.

ರಮ್ಯಾ ಶೇರ್ ಮಾಡಿರುವಲಿಂಕ್:https://www.instagram.com/stories/divyaspandana/2591416624907539356/

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.