ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾಲಿ ಧನಂಜಯ್‌ ನಟನೆಯ ‘ಉತ್ತರಕಾಂಡ’ ಚಿತ್ರದಿಂದ ಹೊರನಡೆದ ನಟಿ ರಮ್ಯಾ

Published 26 ಮಾರ್ಚ್ 2024, 13:20 IST
Last Updated 26 ಮಾರ್ಚ್ 2024, 13:20 IST
ಅಕ್ಷರ ಗಾತ್ರ

ಹತ್ತು ವರ್ಷಗಳ ಬಳಿಕ ನಟ ಡಾಲಿ ಧನಂಜಯ್‌ ನಟನೆಯ ‘ಉತ್ತರಕಾಂಡ’ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ನಟಿಸುತ್ತಿರುವುದಾಗಿ ಹೇಳಿದ್ದ ನಟಿ ರಮ್ಯಾ, ಇದೀಗ ಈ ಚಿತ್ರದಿಂದಲೂ ಹೊರನಡೆದಿರುವುದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಮಾಹಿತಿ ಹಂಚಿಕೊಂಡಿರುವ ರಮ್ಯಾ, ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲು ಸಮಯಾವಕಾಶ ಇಲ್ಲದಿರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

‘ಸಮಯದ ಅಲಭ್ಯತೆ ಕಾರಣಕ್ಕೆ ‘ಉತ್ತರಕಾಂಡ’ ಚಿತ್ರತಂಡದ ಜೊತೆ ಕೆಲಸ ಮಾಡುತ್ತಿಲ್ಲ. ಸ್ವಲ್ಪ ದಿನಗಳ ಕಾಲ ರಾಜಕೀಯ ಮತ್ತು ಸಿನಿಮಾಗಳಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ್ದೇನೆ. ಚಿತ್ರತಂಡಕ್ಕೆ ಶುಭಾಶಯಗಳು’ ಎಂದಿದ್ದಾರೆ.

ತಮ್ಮದೇ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದ ರಮ್ಯಾ, ನಂತರ ‘ಉತ್ತರಕಾಂಡ’ ಚಿತ್ರದಲ್ಲಿ ನಟಿಸುವುದಾಗಿ ಘೋಷಿಸಿದ್ದರು. ‘10 ವರ್ಷಗಳ ಬಳಿಕ ಉತ್ತರಕಾಂಡ ಸಿನಿಮಾ ಮೂಲಕ ನಾನು ಬೆಳ್ಳಿಪರದೆಗೆ ಹಿಂತಿರುಗುತ್ತಿದ್ದೇನೆ’ ಎಂದು ಟ್ವೀಟ್‌ ಕೂಡ ಮಾಡಿದ್ದರು.

ಅಲ್ಲದೇ ಇತ್ತೀಚೆಗೆ ಬಿಡುಗಡೆಯಾದ ‘ಹಾಸ್ಟೆಲ್ ಹುಡುಗರು’ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ರಮ್ಯಾ ನಟಿಸಿದ್ದರು.

'ಉತ್ತರಕಾಂಡ" ಚಿತ್ರವನ್ನು ‘ರತ್ನನ್ ಪ್ರಪಂಚ’ ಖ್ಯಾತಿಯ ರೋಹಿತ್ ಪದಕಿ ನಿರ್ದೇಶಿಸುತ್ತಿದ್ದು, ಕೆ.ಆರ್.ಜಿ ಸಂಸ್ಥೆ ನಿರ್ಮಾಣದ ಹೊಣೆ ಹೊತ್ತಿದೆ.

ನಟಿ ರಮ್ಯಾ ಇನ್‌ಸ್ಟಾಗ್ರಾಂ ಸ್ಟೋರಿ

ನಟಿ ರಮ್ಯಾ ಇನ್‌ಸ್ಟಾಗ್ರಾಂ ಸ್ಟೋರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT