ಸೋಮವಾರ, ಜುಲೈ 26, 2021
21 °C

ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದ ನಟಿ ಶ್ರುತಿ ಮತ್ತು ಪುತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟಿ ಹಾಗೂ ಬಿಜೆಪಿ ನಾಯಕಿ ಶ್ರುತಿ ಮತ್ತು ಅವರ ಮಗಳು ಗೌರಿ, ಧರ್ಮಸ್ಥಳದ ಮಂಜುನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದಿದ್ದಾರೆ.

ಮಗಳೊಂದಿಗೆ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿರುವ ವಿಡಿಯೊವನ್ನು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಶ್ರುತಿ ಹಂಚಿಕೊಂಡು, ಬಂದಿದ್ದೆಲ್ಲವು ಬರಲಿ ಭಗವಂತನ ದಯೆ, ನಿಮ್ಮೆಲರ ಆಶೀರ್ವಾದ, ಹಾರೈಕೆ ಸದಾ ಇರಲಿ ಎಂದು ಬರೆದಿದ್ದಾರೆ.

ಶ್ರುತಿ ಹಳದಿ ಮತ್ತು ಗುಲಾಬಿ ಮಿಶ್ರಿತ ಸೀರೆಯಲ್ಲಿ, ಗೌರಿ ಪಿಂಕ್ ಬಣ್ಣದ ಜರಿ ಸೀರೆಯಲ್ಲಿ ಕಂಗೊಳಿಸುತ್ತಿದ್ದರು. ದೇವರ ದರ್ಶನ ಪಡೆದು ಹೊರಬರುತ್ತಿರುವ ವಿಡಿಯೊವನ್ನು ಶೇರ್‌ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಶುಭ ಹಾರೈಕೆಯ ಕಮೆಂಟ್‌ಗಳನ್ನು ಮಾಡಿದ್ದಾರೆ.

ಶಿವರಾಜ್‌ಕುಮಾರ್‌ 124ನೇ ಚಿತ್ರಕ್ಕೆ ಮೆಹ್ರೀನ್‌ ನಾಯಕಿ

ರಾಜ್ಯ ಸರ್ಕಾರ ಇತ್ತೀಚೆಗೆ ಶ್ರುತಿ ಅವರನ್ನು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿದ ಬೆನ್ನಲ್ಲೇ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು