ಬೆಂಗಳೂರು: ಜಾರಿ ಬಿದ್ದು ಪೆಟ್ಟು ಮಾಡಿಕೊಂಡಿದ್ದ ಹಿರಿಯ ನಟಿ ಲೀಲಾವತಿಯವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ನಟಿಯರಾದ ಸುಧಾ ರಾಣಿ, ಮಾಳವಿಕಾ ಮತ್ತುಶ್ರುತಿಅವರು ಲೀಲಾವತಿಯವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಲೀಲಾವತಿಯವರನ್ನು ಭೇಟಿ ಮಾಡಿದ ಚಿತ್ರಗಳನ್ನು ನಟಿ ಸುಧಾರಾಣಿ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಅಮ್ಮ, ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಕಲಾವಿದೆ ಇವರು. ನೂರಾರು ಸಿನಿಮಾಗಳಲ್ಲಿ ಬೇರೆ ಬೇರೆ ರೀತಿಯ ಪಾತ್ರಗಳ ಮೂಲಕ ನಮ್ಮೆಲ್ಲರನ್ನು ರಂಜಿಸಿದ್ದಾರೆ. ಲೀಲಾವತಿ ಎನ್ನುವುದು ದುರ್ಗಾದೇವಿಯ ಮತ್ತೊಂದು ಹೆಸರು, ಕನ್ನಡದಲ್ಲಿ ಲೀಲಾ ಎನ್ನುವ ಪದಕ್ಕೆ ಮತ್ತೊಂದು ಅರ್ಥ ವಿನೋದ. ಲೀಲಾವತಿ ಅಮ್ಮ ದುರ್ಗೆಯ ಅವತಾರವಾದರು, ಜೀವನದ ಎಲ್ಲಾ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಇಂದು ಎಲ್ಲಾ ಹೆಣ್ಣುಮಕ್ಕಳಿಗೆ ಮಾದರಿಯಾಗಿ ನಿಂತಿದ್ದಾರೆ. ಅವರು ವಾಸವಿರುವ ಊರಿನಲ್ಲಿ ಬಡಜನರಿಗಾಗಿ ಆಸ್ಪತ್ರೆ ಕಟ್ಟಿಸಿದ್ದಾರೆ, ಹಸು ಕರುಗಳಿಗೆ ನೀರಿನ ಟ್ಯಾಂಕ್ ಕಟ್ಟಿಸಿ ಅವುಗಳಿಗೆ ಮೇವು ನೀಡಿದ್ದಾರೆ, ಎಷ್ಟೋ ಜನರಿಗೆ ಊಟ ನೀಡಿ ಸಹಾಯ ಮಾಡುತ್ತಾ ಇರುವ ಇವರನ್ನು ಅನ್ನಪೂರ್ಣೇಶ್ವರಿಯ ಸ್ವರೂಪ ಎಂದು ಕರೆಯುವುದೋ ಅಥವಾ ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಅದೆಲ್ಲವನ್ನು ಭೂಮಿ ತಾಯಿಯ ಹಾಗೆ ತನ್ನಲ್ಲಿಯೇ ಹೊತ್ತು, ತಾಳ್ಮೆಯಿಂದ ಎಲ್ಲವನ್ನು ಸಹಿಸಿ, ಲೀಲಾಜಾಲವಾಗಿ ನಿಭಾಯಿಸಿರವ ಇವರನ್ನು ಭೂಮಿ ತಾಯಿಯ ಸ್ವರೂಪ ಎಂದು ಕರೆಯುವುದೋ.. ಎಂದು ಸುಧಾರಾಣಿ ಬರೆದುಕೊಂಡಿದ್ದಾರೆ.

ಇಂತಹ ವ್ಯಕ್ತಿತ್ವ ಹೊಂದಿರುವ ಲೀಲಾವತಿ ಅಮ್ಮನವರ ಜೊತೆ ಬಾಲನಟಿಯಾಗಿ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸುವ ಅವಕಾಶ ನನಗೆ ಸಿಕ್ಕಿತ್ತು, ನಾಯಕಿಯಾದ ಮೇಲೂ ಲೀಲಾವತಿ ಅಮ್ಮನವರ ಜೊತೆ ಸುಮಾರು ಸಿನಿಮಾಗಳಲ್ಲಿ ಕೆಲಸ ಮಾಡುವ ಸೌಭಾಗ್ಯ ಸಿಕ್ಕಿದ್ದು ನನ್ನ ಅದೃಷ್ಟ ಎಂದಿದ್ದಾರೆ.

ಇಲ್ಲಿರುವ ಎರಡು ಫೋಟೋಗಳಲ್ಲಿ ಮೊದಲನೆಯದು ನಾನು ಬಾಲನಟಿಯಾಗಿ ನಟಿಸಿದ ಮೊದಲ ಸಿನಿಮಾ ‘ಕಿಲಾಡಿ ಕಿಟ್ಟು’ ಚಿತ್ರೀಕರಣದ ಸಮಯದ ಫೋಟೋ. ಮತ್ತೊಂದು ಇಂದು ಲೀಲಾವತಿ ಅಮ್ಮನವರನ್ನು ಭೇಟಿ ಮಾಡಿದ ಸಂದರ್ಭದ ಫೋಟೋ. ವರ್ಷಗಳು ಉರುಳಿವೆಯೇ ಹೊರತು ನಮ್ಮ ನಡುವೆ ಇರುವ ಬಾಂಧವ್ಯ ಕಡಿಮೆಯಾಗಿಲ್ಲ ಎಂದು ಸುಧಾರಾಣಿ ಹೇಳಿದ್ದಾರೆ.

ಇತ್ತೀಚೆಗೆ, ಸೋಲದೇವನಹಳ್ಳಿಯ ತೋಟದ ಮನೆಯ ಸ್ನಾನಗೃಹದಲ್ಲಿ ಜಾರಿಬಿದ್ದು ಹಿರಿಯ ನಟಿ ಲೀಲಾವತಿ ಪೆಟ್ಟು ಮಾಡಿಕೊಂಡಿದ್ದರು. ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.