ಬೆಂಗಳೂರು: ಚಂದನವನದ ಹಿರಿಯ ನಟಿ ಸುಧಾರಾಣಿ ಅವರು ಈಗ ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ’ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸುಧಾರಾಣಿ ಅವರು ವಿಡಿಯೊ ಹಂಚಿಕೊಂಡು ‘ನನಗೆ ಅಪಾರ ಹೆಮ್ಮೆಯಾಗುತ್ತಿದೆ’ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
.ಬಹುದಿನದ ಕನಸು ನನಸು: ಗಾಯಕಿ ಎಸ್. ಜಾನಕಿ ಅವರನ್ನು ಭೇಟಿಯಾದ ನಟಿ ಸುಧಾರಾಣಿ.ರಾಷ್ಟ್ರಮಟ್ಟದಲ್ಲಿ ಪ್ರಾಬಲ್ಯ ಹೆಚ್ಚಿಸಿಕೊಂಡ ನಂದಿನಿ ಉತ್ಪನ್ನ: SR ಪಾಟೀಲ.
‘ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ. ಡಾ. ರಾಜ್ಕುಮಾರ್, ಶಿವರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರಂತಹ ಮೇರು ವ್ಯಕ್ತಿಗಳ ಹಾದಿಯನ್ನು ಅನುಸರಿಸಿ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕೇವಲ ಅನುಕರಣೆಯಲ್ಲ ಧನ್ಯತೆ ಮತ್ತು ಹೆಮ್ಮೆಯ ಜವಾಬ್ದಾರಿ’ ಎಂದಿದ್ದಾರೆ.

‘ಬಮುಲ್ ಅಧ್ಯಕ್ಷರಾದ ಡಿ. ಕೆ. ಸುರೇಶ್ ಅವರೊಂದಿಗೆ ಹಾಗೂ ಬಮುಲ್ನ ಹೊಸ ಉತ್ಪನ್ನಗಳು, ತಂತ್ರಯೋಜನೆ ಮತ್ತು ಮಾರುಕಟ್ಟೆ ಕಾರ್ಯತಂತ್ರವನ್ನು ಮುನ್ನಡೆಸುತ್ತಿರುವ ಮನೋಹರ್ ಅಯ್ಯರ್ ಅವರೊಂದಿಗೆ ಆತ್ಮೀಯ ಹಾಗೂ ಅರ್ಥಪೂರ್ಣ ಸಂವಾದ ನಡೆಯಿತು. ಬರುವ ಹೊಸ ಉತ್ಪನ್ನಗಳ ಬಿಡುಗಡೆಯ ಹಿಂದೆ ಇರುವ ದೃಷ್ಟಿಕೋನ ನಿಜಕ್ಕೂ ಪ್ರೇರಣಾದಾಯಕವಾಗಿತ್ತು. ನಮ್ಮ ದೇಸಿ ಹಸುಗಳನ್ನು ಸಂರಕ್ಷಿಸುವುದು, ರೈತರಿಗೆ ನ್ಯಾಯಸಮ್ಮತ ಬೆಲೆ ಖಚಿತಪಡಿಸುವುದು ಹಾಗೂ ಗ್ರಾಹಕರಿಗೆ ಗುಣಮಟ್ಟದ, ವಿಶ್ವಾಸಾರ್ಹ ಉತ್ಪನ್ನಗಳನ್ನು ತಲುಪಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ’ ಎಂದಿದ್ದಾರೆ.

‘ಈ ಹೊಸ ಅಧ್ಯಾಯದಲ್ಲಿ ದೇಸಿ ಹಸುಗಳಿಂದ ತಯಾರಿಸಿದ A2 ತುಪ್ಪ, A2 ಹಾಲು ಸೇರಿದಂತೆ ಹಲವು ಉತ್ಪನ್ನಗಳು ಸೇರಿದೆ. ಸಂಪ್ರದಾಯ, ಶುದ್ಧತೆ ಮತ್ತು ರೈತರ ಕಲ್ಯಾಣದ ಮೌಲ್ಯಗಳು ಅಡಕವಾಗಿರುವ, ರೈತರನ್ನು ಮುನ್ನೆಲೆಗೆ ತರುವ, ನಮ್ಮ ಬೇರುಗಳನ್ನು ಗೌರವಿಸುವ ಮತ್ತು ಕರ್ನಾಟಕದ ಪರಂಪರೆಯನ್ನು ಮುಂದಿನ ಪೀಳಿಗೆಗಳಿಗೆ ಸಾಗಿಸುವ ಈ ಚಳವಳಿಗೆ ಬೆಂಬಲ ನೀಡಲು ನನಗೆ ಅಪಾರ ಹೆಮ್ಮೆಯಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.