‘ಆನಂದ್’ ಚಿತ್ರದ ಮೂಲಕ ನಾಯಕಿಯಾಗಿ ಬೆಳ್ಳಿತೆರೆಗೆ ಹೆಜ್ಜೆ ಇಟ್ಟ ನಟಿ ಸುಧಾರಾಣಿ, ಇದೀಗ ಕಿರುಚಿತ್ರವೊಂದರಲ್ಲಿ ನಟಿಸಿದ್ದಾರೆ. ‘ಘೋಸ್ಟ್’ ಎಂಬ ಶೀರ್ಷಿಕೆಯ ಈ ಚಿತ್ರವನ್ನು ಸುದೇಶ್ ಕೆ.ರಾವ್ ನಿರ್ದೇಶಿಸಿದ್ದಾರೆ.

ಪ್ರಸ್ತುತ ಸಿನಿಮಾ ಜೊತೆಗೆ ಧಾರಾವಾಹಿಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ ಸುಧಾರಾಣಿ. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯ ಮೂಲಕ ಕಿರುತೆರೆ ಪ್ರವೇಶಿಸಿದ ಅವರು ‘ಘೋಸ್ಟ್’ ಕಿರುಚಿತ್ರವನ್ನು ನಿರ್ಮಾಣ ಮಾಡಿರುವುದು ವಿಶೇಷ. ಈ ಕಿರುಚಿತ್ರವು ಸಸ್ಪೆನ್ಸ್ ಥ್ರಿಲ್ಲರ್ ಅಂಶವನ್ನು ಹೊಂದಿದ್ದು, ಜಗತ್ತಿನಲ್ಲಿ ಒಳ್ಳೆಯದು ಹೇಗಿದೆಯೋ ಹಾಗೆಯೇ ಕೆಟ್ಟದ್ದೂ ಇದೆ. ದೇವರು ಇದ್ದಾನೆ. ದೆವ್ವವೂ ಇದೆ. ಇದೆಲ್ಲವೂ ನಮ್ಮ ನಮ್ಮ ಕಲ್ಪನೆಗೆ ಬಿಟ್ಟದ್ದು. ಈ ವಿಚಾರದ ಮೇಲೆ ಬಂದಂತಹ ಒಂದು ಎಳೆಯನ್ನಿಟ್ಟುಕೊಂಡು ಈ ಚಿತ್ರ ನಿರ್ಮಾಣವಾಗಿದೆ. ‘ಶ್ರೀರಸ್ತು ಶುಭಮಸ್ತು ಧಾರಾವಾಹಿಯ ನಿರ್ದೇಶಕರು ಈ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಿರ್ಮಾಣದ ಮೊದಲ ಹೆಜ್ಜೆಯಾಗಿ ಇದನ್ನು ನಿರ್ಮಾಣ ಮಾಡಿದ್ದೇನೆ ಹಾಗೂ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದೇನೆ’ ಎನ್ನುತ್ತಾರೆ ಸುಧಾರಾಣಿ.

ಚಿತ್ರದಲ್ಲಿ ಸುಧಾರಾಣಿಯವರ ಜೊತೆಗೆ ನಟಿಸುವುದರ ಜೊತೆಗೆ, ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿರುವ ಸುದೇಶ್ ಕೆ. ರಾವ್ ಮಾತನಾಡಿ ‘ಘೋಸ್ಟ್ ವಿಶೇಷ ಕಥೆಯಾಗಿದೆ. ಪ್ರಪಂಚದಲ್ಲಿ ಇರುವುದೆಲ್ಲವೂ ಪಾಸಿಟಿವ್. ನಾವೇ ಎಲ್ಲದರಲ್ಲೂ ನಕಾರಾತ್ಮಕ ಅಂಶಗಳನ್ನು ಹುಡುಕಿ, ನಮ್ಮ ತಲೆ ಮತ್ತು ಮನಸ್ಸನ್ನು ಕೆಡಿಸಿಕೊಳ್ಳುತ್ತೇವೆ. ಅಂತಹ ಎಲ್ಲರಿಗೂ ಈ ಕಿರುಚಿತ್ರ ಪರಿಹಾರ ನೀಡಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.