ಆದಿತ್ಯ ಧಾರ್ ಅವರೊಂದಿಗೆ ವಿವಾಹ
‘ಉರಿ‘ ಚಿತ್ರದ ನಿರ್ದೇಶಕನನ್ನು ವರಿಸಿದ ಬಾಲಿವುಡ್ ನಟಿ ಯಾಮಿ ಗೌತಮ್
ನವದೆಹಲಿ: ಕನ್ನಡದ 'ಉಲ್ಲಾಸ ಉತ್ಸಾಹ' ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿ, ಬಾಲಿವುಡ್’ನಲ್ಲಿ ಮಿಂಚುತ್ತಿರುವ ನಟಿ ಯಾಮಿ ಗೌತಮ್ ಉರಿ ಚಿತ್ರದ ನಿರ್ದೇಶಕ ಆದಿತ್ಯ ಧಾರ್ ಅವರೊಂದಿಗೆ ವಿವಾಹವಾಗಿದ್ದಾರೆ.
ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಯಾಮಿ ಮದುವೆಯ ಫೋಟೊ ಹಂಚಿಕೊಂಡಿದ್ದಾರೆ. ಯಾಮಿ ಗೌತಮ್ – ಆದಿತ್ಯಗೆ ಸೆಲೆಬ್ರಿಟಿಗಳು, ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
'ನಿನ್ನ ಬೆಳಕಲ್ಲಿ ನಾನು ಪ್ರೀತಿಸುವುದ ಕಲಿತೆ’ ಎಂದು ಯಾಮಿ ಬರೆದುಕೊಂಡಿದ್ದಾರೆ. ಕೊರೊನಾ ಕಾರಣದಿಂದ ಆಪ್ತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದಾರೆ.
ಯಾಮಿ ಗೌತಮ್ ಅವರು ಹಿಮಾಚಲ ಪ್ರದೇಶ ಮೂಲದವರಾಗಿದ್ದು, ಆದಿತ್ಯ ಧಾರ್ ಅವರು ದೆಹಲಿ ಮೂಲದವರಾಗಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.