ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರಾವಳಿ’ಯ ಮತ್ತೊಂದು ಕಥೆ ‘ಅಧಿಪತ್ರ’

Published 18 ಮೇ 2024, 3:30 IST
Last Updated 18 ಮೇ 2024, 3:30 IST
ಅಕ್ಷರ ಗಾತ್ರ

‘ಕಾಂತಾರ’ ಸಿನಿಮಾ ಬಳಿಕ ಕರಾವಳಿಯ ಸಂಸ್ಕೃತಿಯನ್ನು ಆಧರಿಸಿಕೊಂಡು ಕಥೆಹೆಣೆಯಲಾಗಿರುವ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ‘ಅಧಿಪತ್ರ’ ಇದಕ್ಕೆ ಹೊಸ ಸೇರ್ಪಡೆ. 

‘ಬಿಗ್‌ಬಾಸ್‌’ ಖ್ಯಾತಿಯ ರೂಪೇಶ್‌ ಶೆಟ್ಟಿ ನಟನೆಯ ‘ಅಧಿಪತ್ರ’ ಸಿನಿಮಾದ ಟೀಸರ್‌ ಇತ್ತೀಚೆಗೆ ಬಿಡುಗಡೆಯಾಗಿದ್ದು, ಇದರ ತುಣುಕುಗಳಲ್ಲಿ ಕರಾವಳಿ ಭಾಗದ ವಿಶೇಷ ಆಚರಣೆ ಆಟಿ ಕಳಂಜಾ, ಯಕ್ಷಗಾನ, ಹುಲಿ ಕುಣಿತದ ದೃಶ್ಯಗಳಿವೆ. ಸಸ್ಪೆನ್ಸ್‌, ಥ್ರಿಲ್ಲರ್‌ ಶೈಲಿಯಲ್ಲಿರುವ ಈ ಸಿನಿಮಾದ ಕಥೆಯಿದೆ. ಪೊಲೀಸ್‌ ಅಧಿಕಾರಿಯಾಗಿ ರೂಪೇಶ್‌ ಶೆಟ್ಟಿ ನಟಿಸಿದ್ದಾರೆ. ಚಯನ್‌ ಶೆಟ್ಟಿ ಆ್ಯಕ್ಷನ್‌ ಕಟ್‌ ಹೇಳಿರುವ ಈ ಸಿನಿಮಾ ಇದೇ ಮುಂಗಾರಿನಲ್ಲಿ ತೆರೆಗೆ ಬರಲಿದೆ.

‘ಕಾಂತಾರ’ ಖ್ಯಾತಿಯ ಪ್ರಕಾಶ್ ತುಮಿನಾಡು, ಎಂ.ಕೆ.‌ ಮಠ, ರಘು ಪಾಂಡೇಶ್ವರ್, ದೀಪಕ್ ರೈ, ಕಾರ್ತಿಕ್ ಭಟ್, ಅನಿಲ್, ಪ್ರಶಾಂತ್ ತಾರಾಬಳಗದಲ್ಲಿದ್ದು, ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ನಿರೂಪಕಿ ಜಾಹ್ನವಿ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಶೂಟಿಂಗ್ ಪೂರ್ಣಗೊಳಿಸಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ. ಕೆಲವೇ ದಿನಗಳಲ್ಲಿ ಬಿಡುಗಡೆ ದಿನಾಂಕವನ್ನು ಘೋಷಿಸಲಿದೆ.   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT