ಬೆಂಗಳೂರು: ಒಡಹುಟ್ಟಿದವರ ಬಂಧ ಬೆಸೆಯುವ ಕಥೆ ಹೊಂದಿರುವ 'ಆದಿ-ಲಕ್ಷ್ಮಿ ಪುರಾಣ‘ ಧಾರವಾಹಿ ಇಂದಿನಿಂದ ರಾತ್ರಿ 8–9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಆರಂಭವಾಗಲಿದೆ.
.ಪ್ಯಾನ್ ಇಂಡಿಯಾಗಾಗಿ ಸಿನಿಮಾ ಮಾಡಿಲ್ಲ: ಕೆಜಿಎಫ್, ಕಾಂತಾರ ಉಲ್ಲೇಖಿಸಿ ನಟ ಸತೀಶ್.
'ಆದಿಲಕ್ಷ್ಮೀ ಪುರಾಣ' ಕಥೆಯು ಸಂಪ್ರದಾಯ ಮತ್ತು ಆಧುನಿಕತೆಯ ಮಧ್ಯೆ ನಿರ್ಮಾಣವಾದ ಕಥೆಯಾಗಿದೆ. ಹಳ್ಳಿ ಹುಡುಗಿ ಲಕ್ಷಿ, ಸಿಟಿ ಹುಡುಗ ಆದಿ ನಡುವಿನ ಕಥೆಯನ್ನು ಪ್ರೇಕ್ಷಕರ ಮುಂದಿಡಲಿದೆ. ಮೊದಲ ಭೇಟಿಯಲ್ಲೇ ಆದಿಯಿಂದ ತಿರಸ್ಕರಿಸಲ್ಪಟ್ಟ ಲಕ್ಷ್ಮಿ ಪುನಃ ಆತನ ಜಗತ್ತಿಗೆ ಮರಳಿ ಬರುತ್ತಾಳೆ. ಆದಿಯ ಪ್ರೀತಿ ಪಡೆಯಲು ಪರದಾಡುವ ಲಕ್ಷ್ಮಿ ಆತನ ತಾತ ಧರ್ಮರಾಜ್ ಅವರು ನೀಡುವ ಸವಾಲುಗಳನ್ನು ಎದುರಿಸುತ್ತಾಳೆ. ಮನೆ, ಕಾಲೇಜು ಇವೆರಡರನ್ನು ಲಕ್ಷ್ಮಿ ಹೇಗೆ ಸರಿದೂಗಿಸಿಕೊಂಡು ಹೋಗುತ್ತಾಳೆ ಎಂಬುದು ಈ ಕಥೆಯ ಹಂದರ.

ಈ ಧಾರಾವಾಹಿಯ ಕಥೆಯನ್ನು ಮತ್ತಷ್ಟು ಜೀವಂತಗೊಳಿಸಿರುವುದು ಅದ್ಭುತವಾದ ತಾರಾಬಳಗ. ರಜನೀಶ್ ಮತ್ತು ಆಶಾ ಅಯ್ನರ್ ಆದಿ ಮತ್ತು ಲಕ್ಷ್ಮಿ ಪಾತ್ರ ನಿರ್ವಹಿಸುತ್ತಿದ್ದಾರೆ. ಅಷ್ಟೇ ಅಲ್ಲ ಈ ಧಾರಾವಾಹಿಯಲ್ಲಿ ಸಂಜೀವ ಎನ್ನುವ ಒಬ್ಬ ಸಾಧಾರಣ ಹಳ್ಳಿ ಶಿಕ್ಷರ್ ಮತ್ತು ಅಮೃತ, ಸಿಟಿ ಹುಡುಗಿ ಪಿಎಚ್ಡಿ ಆಕಾಂಕ್ಷಿ, ಇವರಿಬ್ಬರು ಮದುವೆ ಆದಮೇಲೆ ಆಗುವ ಬದುಕು ಬದಲಾಗುವ ಕುರಿತು ಈ ಧಾರವಾಹಿಯಲ್ಲಿ ಕಾಣಬಹುದು.
.'ದಿ ಫ್ಯಾಮಿಲಿ ಮ್ಯಾನ್ ಸೀಸನ್3' ವೆಬ್ ಸರಣಿ ತಂಡದ ಜತೆ ಕಾಲ ಕಳೆದ ನಟಿ ಪ್ರಿಯಾಮಣಿ.
ಇನ್ನು ಈ ಧಾರಾವಾಹಿಯಲ್ಲಿ ಮಂಜುನಾಥ ಹೆಗ್ಡೆ, ಅಶೋಕ್ ಶರ್ಮಾ, ರಕ್ಷಿತಾ, ಸುಷ್ಮಾ ನಾಣಯ್ಯ, ಮಾಲತಿ ಸರ್ದೇಶಪಾಂಡೆ, ಕೈಲಾಶ್, ಜ್ಯೋತಿ, ಸವಿತಾ ಕೃಷ್ಣಮೂರ್ತಿ ಮತ್ತು ಭಾಗ್ಯಶ್ರೀ ರಾವ್ ಸೇರಿದಂತೆ ಅನೇಕರು ನಟಿಸಿದ್ದಾರೆ.

'ಆದಿಲಕ್ಷ್ಮಿ ಪುರಾಣ' ಕೇವಲ ಸಾಧಾರಣ ಕಥೆಯಾಗಿರದೆ, ನಿಜ ಜೀವನಕ್ಕೆ ಹತ್ತಿರವಾಗಿದ್ದು ಬಹಳ ವಿಭಿನ್ನವಾಗಿದೆ. ಈ ಧಾರಾವಾಹಿಯ ಕಥೆಯ ನೈಜ್ಯತೆ, ಉತ್ತಮ ತಾರಾಬಳಗ ಮತ್ತು ನಿರ್ದೇಶನ, ಅದ್ಭುತ ಸ್ಥಳಗಳು, ಕಲಾತ್ಮಕವಾಗಿ ವಿನ್ಯಾಸಗೊಳಿಸಿದ ಸೆಟ್ಗಳು ವೀಕ್ಷಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿ ಆಗಲಿದೆ. ವಿರುದ್ಧ ದಿಕ್ಕಿನಲ್ಲಿ ಪ್ರಯಾಣಿಸುವವರು ಒಂದಾದರೆ ಏನಾಗಲಿದೆ ಎಂಬುದಕ್ಕೆ ಉತ್ತರ ಮುಂದಿನ ದಿನಗಳಲ್ಲಿ ಸಿಗಲಿದೆ‘ ಎಂದು ಧಾರವಾಹಿ ತಂಡ ಮಾಹಿತಿ ನೀಡಿದೆ.
.Sandalwood Actress | ಮಾದಕ ನೋಟದಲ್ಲಿ ಕಣ್ಮನ ಸೆಳೆದ ನಟಿ ಶ್ರುತಿ ಹರಿಹರನ್.
ಇಷ್ಟು ದಿನ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿದ್ದ ‘ಶ್ರೀ ರಾಘವೇಂದ್ರ ಮಹಾತ್ಮೆ‘ ಧಾರಾವಾಹಿ ಈ ವಾರದಿಂದ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 6 ಗಂಟೆಯಿಂದ 7 ಗಂಟೆಯ ವರೆಗೆ ಪ್ರಸಾರವಾಗಲಿದೆ ಎಂದು ತಂಡ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.