ಹೈದರಾಬಾದ್: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಆದಿಪುರುಷ‘ ದ ಫೈನಲ್ ಟ್ರೇಲರ್ ಬಿಡುಗಡೆ ಆಗಿದೆ.

ಮಂಗಳವಾರ ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಟ್ರೇಲರ್ ಅನ್ನು ಚಿತ್ರದ ನಿರ್ದೇಶಕ ಓಂ ರಾವುತ್ ಬಿಡುಗಡೆ ಮಾಡಿದರು.

ಕೆಲವೇ ಗಂಟೆಗಳಲ್ಲಿ ಈ ಟ್ರೇಲರ್ 20 ಮಿಲಿಯನ್‌ಗೂ ಅಧಿಕ ವೀಕ್ಷಣೆ ಕಂಡಿದೆ. ಇನ್ನೊಂದು ವಿಶೇಷವೆಂದರೆ ನಿನ್ನೆಯ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಚಿತ್ರತಂಡ ಸುಮಾರು ₹50 ಲಕ್ಷ ರೂಪಾಯಿಯ ಪಟಾಕಿ ಸಿಡಿಸಲಾಗಿದೆ ಎಂದು ತಿಳಿದು ಬಂದಿದೆ. ತಿರುಮಲ ದೇವಸ್ಥಾನದ ಅರ್ಚಕರು ಕೂಡ ಈ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ಕುರಿತು ಟೈಮ್ಸ್ ಆಫ್ ಇಂಡಿಯಾ ವೆಬ್‌ಸೈಟ್ ವರದಿ ಮಾಡಿದೆ.

ಈ ಸಿನಿಮಾದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದಿಪುರುಷ ಸಿನಿಮಾವು ಇದೇ ಜೂನ್ 16ರಂದು ಜಾಗತಿಕವಾಗಿ ಚಿತ್ರ ಮಂದಿರಗಳಲ್ಲಿ ಹಿಂದಿ, ತೆಲುಗು, ತಮಿಳು, ಕನ್ನಡ, ಮಲಯಾಳಂನಲ್ಲಿ ತೆರೆ ಕಾಣಲಿದೆ.

ಓಂ ರಾವತ್ ನಿರ್ದೇಶಿಸಿರುವ ‘ಆದಿಪುರುಷ‘ ಸಿನಿಮಾವು ಬಿಗ್ ಬಜೆಟ್ ಚಿತ್ರವಾಗಿದ್ದು, ಪ್ಯಾನ್ ಇಂಡಿಯಾ ಸಿನಿಮಾವಾಗಿ ಪ್ರೇಕ್ಷಕರ ಎದುರು ಬರಲಿದೆ. ಈ ಚಿತ್ರದಲ್ಲಿ ನಟಿ ಕೃತಿ ಸನೋನ್, ಸನ್ನಿ ಸಿಂಗ್ , ದೇವ ದತ್ತ ನಾಗೆ ಹಾಗೂ ಸೈಫ್ ಅಲಿ ಖಾನ್ ಸಹ ನಟಿಸಿದ್ದಾರೆ.

ಚಿತ್ರಮಂದಿರಗಳಲ್ಲಿ ‘ಆದಿಪುರುಷ‘ ಚಿತ್ರವು 3ಡಿಯಲ್ಲಿ ಕಾಣಿಸಲಿದ್ದು, ಮೊದಲ ಪ್ರದರ್ಶನವು ಜೂನ್ 13ರಂದು ನ್ಯೂಯಾರ್ಕ್‌ನ ಟ್ರಿಬೆಕಾ ಚಲನಚಿತ್ರೋತ್ಸವ 2023ನಲ್ಲಿ ತೆರೆ ಮೇಲೆ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.