ಶುಕ್ರವಾರ, ಡಿಸೆಂಬರ್ 9, 2022
21 °C

ಹೊರಬಿತ್ತು ಪ್ರಭಾಸ್‌ ನಟನೆಯ ಆದಿಪುರುಷನ ಮೊದಲ ನೋಟ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ತೆಲುಗು ನಟ ಪ್ರಭಾಸ್‌ ಅಭಿನಯದ ಆದಿಪುರುಷ್‌ ಚಿತ್ರದ ಪೋಸ್ಟರ್‌ ಇಂದು ಬಿಡುಗಡೆಗೊಂಡಿದೆ. ಶ್ರೀರಾಮನಾಗಿ ಕಾಣಿಸಿಕೊಂಡಿರುವ ಪ್ರಭಾಸ್‌, ಚಿತ್ರದ ಮೊದಲ ನೋಟವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ಆರಂಭ. ಅಯೋಧ್ಯೆಯ ಸರಯೂ ನದಿಯ ತಟದಲ್ಲಿ ನಮ್ಮನ್ನು ಸೇರಿಕೊಳ್ಳಿ. ಅ.2ರಂದು ಚಿತ್ರದ ಮೊದಲ ಪೋಸ್ಟರ್‌ ಮತ್ತು ಟೀಸರ್‌ ಬಿಡುಗಡೆಯಾಗಲಿದೆ ಎಂದು ಬರೆದುಕೊಂಡಿದ್ದಾರೆ.

 

‘ಆದಿಪುರುಷ್’ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸಿದ್ದಾರೆ. ಸೈಫ್ ಅಲಿ ಖಾನ್ ರಾವಣನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಕೃತಿ ಸನನ್ ಸೀತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜ.12, 2023ರಂದು ಚಿತ್ರ ತೆರೆಗೆ ಬರಲಿದೆ ಎಂದು ಪ್ರಭಾಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಪೌರಾಣಿಕ ಕಥಾ ಹಂದರವುಳ್ಳ ಹಿಂದಿ ಹಾಗೂ ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ‘ಆದಿಪುರುಷ್’ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು ಟಿ ಸೀರೀಸ್ ಪ್ರೊಡಕ್ಸನ್ ಕಂಪನಿ ಈ ಚಿತ್ರವನ್ನು ಸುಮಾರು ₹500 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದೆ. ಅಜಯ್ ದೇವಗನ್ ಅಭಿನಯದ ‘ತಾನಾಜಿ’ ಸಿನಿಮಾ ನಿರ್ದೇಶಿಸಿದ್ದ ಓಂ ರಾವುತ್ ‘ಆದಿಪುರುಷ್’ ನಿರ್ದೇಶನ ಮಾಡುತ್ತಿದ್ದಾರೆ. ಇದು 3ಡಿ ಯಲ್ಲಿ ಮೂಡಿಬರುತ್ತಿರುವುದು ವಿಶೇಷ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು