ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಯಲ್ಲಿ ಪ್ರಭಾಸ್‌ ಅಭಿನಯದ ‘ಆದಿಪುರುಷ್’ ಟೀಸರ್‌ ಬಿಡುಗಡೆ ಸಾಧ್ಯತೆ

Last Updated 21 ಸೆಪ್ಟೆಂಬರ್ 2022, 11:26 IST
ಅಕ್ಷರ ಗಾತ್ರ

ಹೈದರಾಬಾದ್‌: ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಅಭಿನಯದ‘ಆದಿಪುರುಷ್’ ಸಿನಿಮಾದ ಟೀಸರ್‌ ‘ಅಯೋಧ್ಯೆ‘ಯಲ್ಲಿ ಬಿಡುಗಡೆಯಾಗಲಿದೆ.

ಈ ಚಿತ್ರದ ಟೀಸರ್‌ ಅಯೊಧ್ಯೆಯಲ್ಲಿ ಬಿಡುಗಡೆಯಾಗಲಿರುವುದು ಬಹುತೇಕ ಖಚಿತವಾಗಿದೆ. ಟೀಸರ್‌ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರು ಭಾಗವಹಿಸಲಿದ್ದಾರೆ ಎಂದು ಚಿತ್ರತಂಡ ಹೇಳಿದೆ.

ಆದರೆ ಸಿಎಂ ಯೋಗಿ ಭಾಗವಹಿಸುವ ಬಗ್ಗೆ ಚಿತ್ರತಂಡ ಇನ್ನು ಖಚಿತಪಡಿಸಿಲ್ಲ.

‘ಆದಿಪುರುಷ್’ ಚಿತ್ರದಲ್ಲಿಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸಿದ್ದಾರೆ. ಸೈಫ್ ಅಲಿ ಖಾನ್ರಾವಣನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಕೃತಿ ಸನನ್ ಸೀತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ನಡುವೆ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

ಪೌರಾಣಿಕ ಕಥಾ ಹಂದರವುಳ್ಳ ಹಿಂದಿ ಹಾಗೂ ತೆಲುಗಿನಲ್ಲಿ ನಿರ್ಮಾಣವಾಗುತ್ತಿರುವ ‘ಆದಿಪುರುಷ್‘ 2023ಕ್ಕೆ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಆದಿಪುರುಷ್ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು ಟಿ ಸೀರೀಸ್ ಪ್ರೊಡಕ್ಸನ್ ಕಂಪನಿ ಈ ಚಿತ್ರವನ್ನು ಸುಮಾರು ₹500 ಕೋಟಿ ವೆಚ್ಚದಲ್ಲಿ ರ್ಮಾಣ ಮಾಡುತ್ತಿದೆ. ಅಜಯ್ ದೇವಗನ್ ಅಭಿನಯದ ‘ತಾನಾಜಿ’ ಸಿನಿಮಾ ನಿರ್ದೇಶಿಸಿದ್ದ ಓಂ ರಾವುತ್ ‘ಆದಿಪುರುಷ್’ ನಿರ್ದೇಶನ ಮಾಡುತ್ತಿದ್ದಾರೆ. ಇದು3ಡಿ ಯಲ್ಲಿ ಮೂಡಿಬರುತ್ತಿರುವುದು ವಿಶೇಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT